ಮನೆ ಕಾನೂನು ಮುಸ್ಲಿಂ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ: ಪ್ರತಾಪ್ ಸಿಂಹ ವಿರುದ್ಧ ಪ್ರಕರಣ ದಾಖಲು

ಮುಸ್ಲಿಂ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ: ಪ್ರತಾಪ್ ಸಿಂಹ ವಿರುದ್ಧ ಪ್ರಕರಣ ದಾಖಲು

0

ಮೈಸೂರು: ಮುಸ್ಲಿಂ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಅರೋಪಿಸಿ ಮಾಜಿ ಸಂಸದ ಪ್ರತಾಪ ಸಿಂಹ ವಿರುದ್ಧ ನಗರ ಯುವ ಕಾಂಗ್ರೆಸ್ ಘಟಕದ ಅದ್ಯಕ್ಷ ಸೈಯದ್ ಅಬ್ರಾರ್ ಉದಯಗಿರಿ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

Join Our Whatsapp Group

‘ಪ್ರತಾಪ ಸಿಂಹ ಅವರು ಮುಸ್ಲಿಂ ಸಮುದಾಯ ಜನಸಂಖ್ಯೆ ಜಾಸ್ತಿ ಮಾಡಿಕೊಂಡು, ಹೆಚ್ಚು ಮಕ್ಕಳು ಹುಟ್ಟಿಸುತ್ತಿದ್ದಾರೆ ಎಂದು ಮಾಧ್ಯಮಕ್ಕೆ ಹೇಳಿಕೆ ನೀಡಿದ್ದು, ಮುಸ್ಲಿಂ ಸಮುದಾಯದ ಜನರನ್ನು ನಿಂದಿಸುವ ರೀತಿಯಲ್ಲಿ ಪ್ರಚೋದನಾಕಾರಿಯಾಗಿ ಮಾತನಾಡಿದ್ದಾರೆ’ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.