ನವದೆಹಲಿ: ಹೈಕಮಾಂಡ್ ನಾಯಕರ ಬುಲಾವ್ ಮೇರೆಗೆ ದೆಹಲಿಗೆ ತೆರಳಿರುವ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕಾಂಗ್ರೆಸ್ ವರಿಷ್ಠರ ಜೊತೆ ಮಹತ್ವದ ಮಾತುಕತೆ ನಡೆಸಿ ನಡೆಸಿದ್ದಾರೆ.
ಇಂದು ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯದಲ್ಲಿನ ಬೆಳವಣಿಗೆ ಬಗ್ಗೆ ರಾಹುಲ್ ಗಾಂಧಿ ಜೊತೆಗೆ ಚರ್ಚೆ ಮಾಡಲಾಯಿತು. ಮುಖ್ಯವಾಗಿ ಜಾತಿಗಣತಿ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಿದರು ಎಂದರು. ಆರ್‌ಸಿಬಿ ಸಂಭ್ರಮಾಚರಣೆ ವೇಳೇ ಸಂಭವಿಸಿದೆ ಕಾಲ್ತುಳಿತ ಪ್ರಕರಣದ ಬಗ್ಗೆ ಸುದೀರ್ಘವಾದ ಚರ್ಚೆ ಮಾಡಲಾಗಿದೆ. ಅದರಲ್ಲೂ ಮುಖ್ಯವಾಗಿ ಜಾತಿ ಜನಗಣತಿ ಬಗ್ಗೆ ಚರ್ಚೆ ನಡೆದಿದೆ. ಜಾತಿ ಜನಗಣತಿ ವರದಿ 10 ವರ್ಷದ ಹಳೆಯದಾಗಿರುವ ಕಾರಣ ಮತ್ತೊಮ್ಮೆ ಸರ್ವೇ ಮಾಡಲು ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ. ಇನ್ನು ಜಾತಿ ಜನಗಣತಿ ಮರು ಸರ್ವೇ ಮಾಡುವ ಬಗ್ಗೆಯೂ ಸಹ ಸ್ವತಃ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಕಾಂಗ್ರೆಸ್ ಹೈಕಮಾಂಡ್ ನಾಯಕರ ಸಭೆ ನಂತರ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರು ಮಾತನಾಡಿ, ಇಂದಿನ ಸಭೆಯಲ್ಲಿ ಜಾತಿ ಜನಗಣತಿಯ ಬಗ್ಗೆ ಚರ್ಚೆ ಮಾಡಿದ್ದೇವೆ. ಜೂನ್ 12ನೇ ತಾರೀಖಿನ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದಿದ್ದಾರೆ. ಇನ್ನು ನಿರ್ಧಿಷ್ಟ ಕಾಲ ಮಿತಿಯಲ್ಲಿ ಮರು ಸರ್ವೇ ನಡೆಸಲಾಗುವುದು ಎಂದಿರುವ ಕಾಂಗ್ರೆಸ್ ನಾಯಕರು 90 ದಿನಗಳ ಕಾಲ ಮಿತಿಯಲ್ಲಿ ವರದಿ ತರಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.















