ಬೆಂಗಳೂರು: ಕಾವೇರಿ ನದಿ ನೀರು ಪ್ರಾಧಿಕಾರ ಹಾಗೂ ಸುಪ್ರೀಂಕೋರ್ಟ್ ತಮಿಳುನಾಡಿಗೆ ನೀರು ಹರಿಸುವಂತೆ ಆದೇಶಿಸಿದೆ. ಇದರಿಂದ ಕಾವೇರಿ ಭಾಗದ ಜನ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದೆಲ್ಲೆಡೆ ಕಾವೇರಿ ಕಿಚ್ಚು ಜೋರಾಗಿದೆ.
ಈ ಬಗ್ಗೆ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಅವರು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದು, ಕಾವೇರಿ ನದಿ ನೀರು ವಿವಾದದ ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸುವಂತೆ ಪ್ರಧಾನಿ ನರೇಂದ್ರ ಮೋದಿಗೆ ಅವರಿಗೆ ಮನವಿ ಮಾಡಿದ್ದಾರೆ.
ಕರ್ನಾಟಕದ ರೈತರಿಗೆ ನೀರಿನ ಕೊರತೆ ಇದೆ. ಹೀಗಾಗಿ ಶೀಘ್ರವಾಗಿ ಈ ವಿವಾದ ಬಗೆಹರಿಸಬೇಕು ಎಂದು ಹೆಚ್ಡಿ ದೇವೇಗೌಡ ಅವರು, ನರೇಂದ್ರ ಮೋದಿಗೆ ಪತ್ರದಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಮತ್ತೊಂದೆಡೆ ಣ್ಣ ನೀರಾವರಿ ಸಚಿವ ಬೋಸರಾಜು ಅವರು ಮಡಿಕೇರಿಯಲ್ಲಿ ಇಂದು ಮಾತನಾಡಿ, ಕಾವೇರಿ ನದಿ ವಿಚಾರದಲ್ಲಿ ಪ್ರಧಾನಿ ಮೋದಿ ಮಧ್ಯಪ್ರವೇಶಿಸಬೇಕು ಎಂದು ಆಗ್ರಹಿಸಿದ್ದಾರೆ. ಕಾವೇರಿ ನದಿ ನೀರು ವಿಚಾರವಾಗಿ ರಾಜ್ಯದ ಸಂಸದರು ಮಾತಾಡಲಿ. ಕಾವೇರಿ ನದಿ ಸಂಬಂಧ ಪ್ರಧಾನಿ ಮೋದಿ ಸರ್ವಪಕ್ಷ ಸಭೆ ಕರೆಯಲಿ. ಕಾವೇರಿ ನೀರು ವಿಚಾರದಲ್ಲಿ ಎಲ್ಲರೂ ಪಕ್ಷಾತೀತವಾಗಿ ಹೋರಾಡಬೇಕು ಎಂದಿದ್ದಾರೆ.