ಮನೆ ರಾಜ್ಯ ಕಾವೇರಿ ವಿವಾದ: ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆದು ರಾಜ್ಯ ರೈತ ಸಂಘದಿಂದ ಪ್ರತಿಭಟನೆ

ಕಾವೇರಿ ವಿವಾದ: ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆದು ರಾಜ್ಯ ರೈತ ಸಂಘದಿಂದ ಪ್ರತಿಭಟನೆ

0

ಮಂಡ್ಯ: ಕಾವೇರಿ ನಿರ್ವಹಣಾ ಮಂಡಳಿ ಏಕ ಪಕ್ಷಿಯವಾಗಿ ತಮಿಳುನಾಡಿಗೆ ನೀರು ಹರಿಸುವಂತೆ ತೀರ್ಮಾನ ತೆಗೆದುಕೊಂಡಿರುವ ವಿರುದ್ಧ ಹಾಗೂ ಕಾವೇರಿ ನೀರಿನ ವಿವಾದ ಬಗೆಹರಿಸದ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ರೈತ ಸಂಘ ವತಿಯಿಂದ ಬೆಂಗಳೂರು ಹಾಗೂ ಮೈಸೂರು ರಾಷ್ಟ್ರೀಯ ಹೆದ್ದಾರಿ ರಸ್ತೆ ತಡೆದು ಪ್ರತಿಭಟನೆ ನಡೆಸಲಾಯಿತು.

ಶ್ರೀರಂಗಪಟ್ಟಣದಲ್ಲಿ ಶುಕ್ರವಾರ ಬೆಳಗ್ಗೆ ಕಾವೇರಿ ನಿರ್ವಹಣ ಮಂಡಳಿ ತಮಿಳುನಾಡಿಗೆ ನೀರು ಹರಿಸಲು ತೆಗೆದುಕೊಂಡಿರುವ ತೀರ್ಮಾನದ ವಿಚಾರವಾಗಿ ಮಧ್ಯ ಪ್ರವೇಶಿಸದ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರವನ್ನು ಕೂಗಿದ ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದರು.

ಚುನಾವಣಾ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಮಧ್ಯಪ್ರವೇಶಿಸಿ ಕಾವೇರಿ ವಿವಾದವನ್ನು ಬಗೆಹರಿಸಿಕೊಡುವುದಾಗಿ ಆಶ್ವಾಸನೆ ನೀಡಿರುತ್ತಾರೆ ಆದರೆ ಚುನಾವಣಾ ಮುಗಿದ ನಂತರ ಕಾವೇರಿ ವಿವಾದದ ಬಗ್ಗೆ ದನಿಯೆತ್ತದ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ ಕೂಗಿದರು.

ಹಾಗೂ ಕ್ರಿಕೆಟ್ ವಿಚಾರವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೊಡುತ್ತಿರುವ ಗಮನವನ್ನು ಕಾವೇರಿ ವಿಚಾರದಲ್ಲಿ ಕೊಡಬೇಕೆಂದು ಪ್ರತಿಭಟನಾ ನಿರತ ರೈತರು ಆಗ್ರಹಿಸಿದರು.

ಹಿಂದಿನ ಲೇಖನಕಲ್ಲಿದ್ದಲು ಅಕ್ರಮ ಸಾಗಾಟ ಪ್ರಕರಣ: ರೈಲ್ವೆ ಸ್ಟೇಷನ್ ಮಾಸ್ಟರ್, ಗುತ್ತಿಗೆದಾರನ ವಿರುದ್ಧ ಪ್ರಕರಣ ದಾಖಲು
ಮುಂದಿನ ಲೇಖನಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಜಯಪ್ರಕಾಶ್​ ಹೆಗ್ಡೆ ಮರು ನೇಮಕ