ಮಂಡ್ಯ: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಆದೇಶ ಹಿನ್ನೆಲೆ ಮಂಡ್ಯದಲ್ಲಿ ಕಾವೇರಿ ಹೋರಾಟ ನಡೆಯುತ್ತಿದ್ದು, ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಕಾರ್ಯಕರ್ತರಿಂದ ಧರಣಿ ಮುಂದುವರೆದಿದೆ.
ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗ ನಡೆಯುತ್ತಿರುವ ಪ್ರತಿಭಟನೆಗೆ ಮಾಜಿ ಸಚಿವ ಸಿ.ಎಸ್. ಪುಟ್ಟರಾಜು ಸಾಥ್ ನೀಡಿದ್ದಾರೆ. ರೈತರ ಧರಣಿಯಲ್ಲಿ ಭಾಗಿಯಾಗಿ, ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾವೇರಿ ಹೋರಾಟಕ್ಕೆ SDPI ಸಾಥ್.
ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ನಡೆಸುತ್ತಿರುವ ನಿರಂತರ ಧರಣಿಯಲ್ಲಿ SDPI ಕಾರ್ಯಕರ್ತರು ಭಾಗಿಯಾಗಿದ್ದಾರೆ.
ಈದ್ ಮಿಲಾದ್ ಹಬ್ಬ ಬಿಟ್ಟು ಕಾವೇರಿ ಹೋರಾಟದಲ್ಲಿ ಪಾಲ್ಗೊಂಡಿದ್ದಾರೆ.
ಟ್ರ್ಯಾಕ್ಟರ್ ಜೊತೆ ಕಾವೇರಿ ಹೋರಾಟಕ್ಕಿಳಿದ ಅನ್ನದಾತರು.
ಇಂಡುವಾಳು, ಸಿದ್ದಯ್ಯನಕೊಪ್ಪಲು ಗ್ರಾಮಸ್ಥರು ತಮ್ಮ ಗ್ರಾಮಗಳಿಂದ ಟ್ರ್ಯಾಕ್ಟರ್ ಗಳ ಮೆರವಣಿಗೆ ಮೂಲಕ ಮಂಡ್ಯಕ್ಕೆ ಆಗಮಿಸಿ, ರೈತ ಹಿತ ರಕ್ಷಣಾ ಸಮಿತಿ ಧರಣಿಯಲ್ಲಿ ಭಾಗಿಯಾಗಿದ್ದಾರೆ.
ರೈತ ಸಂಘದ ಜಿಲ್ಲಾಧ್ಯಕ್ಷ ಇಂಡುವಾಳು ಚಂದ್ರಶೇಖರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ.
ಸ್ವಾಮಿನಾಥನ್ ಅಗಲಿಕೆಗೆ ಸಂತಾಪ.
ಕೃಷಿ ತಜ್ಞ ಸ್ವಾಮಿನಾಥನ್ ಅಗಲಿಕೆ ಹಿನ್ನೆಲೆ ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ನಡೆಸುತ್ತಿರುವ ನಿರಂತರ ಧರಣಿ ಸ್ಥಳದಲ್ಲಿ ಮೌನಾಚರಣೆ ಮೂಲಕ ಕಾವೇರಿ ಹೋರಾಟಗಾರರು ಸಂತಾಪ ಸೂಚಿಸಿದ್ದಾರೆ.
ಕಾವೇರಿ ಹೋರಾಟಕ್ಕೆ ವಿಶ್ವಕರ್ಮ ಮಹಾಸಭಾ ಬೆಂಬಲ
ಮಂಡ್ಯದಲ್ಲಿ ನಡೆಯುತ್ತಿರುವ ಕಾವೇರಿ ಹೋರಾಟಕ್ಕೆ ವಿಶ್ವಕರ್ಮ ಮಹಾಸಭಾ ಬೆಂಬಲ ವ್ಯಕ್ತಪಡಿಸಿದ್ದು, ಪರಿಷತ್ ಸದಸ್ಯ ಹಾಗೂ ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ಅಧ್ಯಕ್ಷ ಕೆ.ಪಿ.ನಂಜುಂಡಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.
ಕೆ.ಪಿ.ನಂಜುಂಡಿ ಹಾಗೂ ವಿಶ್ವಕರ್ಮ ಸಮಾಜದ ನೂರಾರು ಜನರು ಮಂಡ್ಯದ ಸಂಜಯ ವೃತ್ತದಿಂದ ವಿಶ್ವೇಶ್ವರಯ್ಯ ಪ್ರತಿಮೆವರೆಗೆ ಪ್ರತಿಭಟನಾ ಮೆರವಣಿಗೆ ಸಾಗಲಿದ್ದಾರೆ.
ಬಳಿಕ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ನಡೆಯುತ್ತಿರುವ ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ನಡೆಸುತ್ತಿರುವ ನಿರಂತರ ಧರಣಿಯಲ್ಲಿ ಭಾಗಿಯಾಗಲಿದ್ದಾರೆ.