ಮಂಡ್ಯ: ಕೆ ಆರ್ ಎಸ್ ಜಲಾಶಯದಿಂದ ತಮಿಳುನಾಡಿಗೆ ನೀರು ಬಿಡುಗಡೆ ಹಿನ್ನೆಲೆ ಸಕ್ಕರೆನಾಡು ಮಂಡ್ಯದಲ್ಲಿ ಕಾವೇರಿ ಕಿಚ್ಚು ಮುಂದುವರೆದಿದ್ದು, ಇಂದು ವಕೀಲರ ಸಂಘದಿಂದ ಪ್ರತಿಭಟನೆ ನಡೆಸಲಾಗುತ್ತಿದೆ.
ವಕೀಲರ ಸಂಘದಿಂದ ಸಂಜಯ್ ವೃತ್ತದವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ ಸಂಜಯ್ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಲಾಗಿದೆ. ಪರಿಣಾಮ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ.
ಬಳಿಕ ರೈತ ಹಿತರಕ್ಷಣಾ ಸಮಿತಿ ಧರಣಿಗೆ ವಕೀಲರು ಬೆಂಬಲ ಸೂಚಿಸಿದ್ದಾರೆ.
Saval TV on YouTube