ಸೆಂಟ್ ಬ್ಯಾಂಕ್ ಹೋಮ್ ಫೈನಾನ್ಸ್ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಅನೇಕ ಕನ್’ಕರೆಂಟ್ ಆಡಿಟರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಿ. ಮೇ 28, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಹಾಕಬೇಕು.
ವಿದ್ಯಾರ್ಹತೆ:
ಸೆಂಟ್ ಬ್ಯಾಂಕ್ ಹೋಮ್ ಫೈನಾನ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸಿಎ (CA) ಪೂರ್ಣಗೊಳಿಸಿರಬೇಕು.
ವೇತನ:
ಸೆಂಟ್ ಬ್ಯಾಂಕ್ ಹೋಮ್ ಫೈನಾನ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 15,000 ಸಂಬಳ ಕೊಡಲಾಗುತ್ತದೆ.
ಉದ್ಯೋಗದ ಸ್ಥಳ:
ಸೆಂಟ್ ಬ್ಯಾಂಕ್ ಹೋಮ್ ಫೈನಾನ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರು, ಲಕ್ನೋ, ನಾಸಿಕ್ ನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 18/05/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಮೇ 28, 2023
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಲೆಕ್ಕಪರಿಶೋಧನಾ ಇಲಾಖೆ (CA ಸಂಸ್ಥೆಯ ಎಂಪಾನೆಲ್ಮೆಂಟ್)
ಸೆಂಟ್ ಬ್ಯಾಂಕ್ ಹೋಮ್ ಫೈನಾನ್ಸ್ ಲಿಮಿಟೆಡ್
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಮುಂಬೈ
ಮುಖ್ಯ ಕಚೇರಿ ಕಟ್ಟಡ
6ನೇ ಮಹಡಿ
MG ರಸ್ತೆ
ಫೋರ್ಟ್
ಫ್ಲೋರಾ ಫೌಂಟೇನ್
ಹುತಾತ್ಮ ಚೌಕ್
ಮುಂಬೈ-400 023
ಅಥವಾ ಇ-ಮೇಲ್ ಐಡಿ enquiry@cbhfl.com ಗೆ ಕಳುಹಿಸಿ.















