ಮನೆ ಉದ್ಯೋಗ ಸಿಎ ಆದವರಿಗೆ ಸೆಂಟ್ ಬ್ಯಾಂಕ್’ನಲ್ಲಿದೆ ಉದ್ಯೋಗ: ಇಂದೇ ಅರ್ಜಿ ಸಲ್ಲಿಸಿ

ಸಿಎ ಆದವರಿಗೆ ಸೆಂಟ್ ಬ್ಯಾಂಕ್’ನಲ್ಲಿದೆ ಉದ್ಯೋಗ: ಇಂದೇ ಅರ್ಜಿ ಸಲ್ಲಿಸಿ

0

ಸೆಂಟ್ ಬ್ಯಾಂಕ್ ಹೋಮ್ ಫೈನಾನ್ಸ್ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

Join Our Whatsapp Group

ಅನೇಕ ಕನ್’ಕರೆಂಟ್ ಆಡಿಟರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಿ. ಮೇ 28, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಹಾಕಬೇಕು.

ವಿದ್ಯಾರ್ಹತೆ:

ಸೆಂಟ್ ಬ್ಯಾಂಕ್ ಹೋಮ್ ಫೈನಾನ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸಿಎ (CA) ಪೂರ್ಣಗೊಳಿಸಿರಬೇಕು.

ವೇತನ:

ಸೆಂಟ್ ಬ್ಯಾಂಕ್ ಹೋಮ್ ಫೈನಾನ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ,  ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 15,000 ಸಂಬಳ ಕೊಡಲಾಗುತ್ತದೆ.

ಉದ್ಯೋಗದ ಸ್ಥಳ:

ಸೆಂಟ್ ಬ್ಯಾಂಕ್ ಹೋಮ್ ಫೈನಾನ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ,  ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರು, ಲಕ್ನೋ, ನಾಸಿಕ್ ನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 18/05/2023

ಅರ್ಜಿ ಸಲ್ಲಿಸಲು ಕೊನೆಯ ದಿನ: ಮೇ 28, 2023

ಅರ್ಜಿ ಹಾಕೋದು ಹೇಗೆ?

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

ಲೆಕ್ಕಪರಿಶೋಧನಾ ಇಲಾಖೆ (CA ಸಂಸ್ಥೆಯ ಎಂಪಾನೆಲ್ಮೆಂಟ್)

ಸೆಂಟ್ ಬ್ಯಾಂಕ್ ಹೋಮ್ ಫೈನಾನ್ಸ್ ಲಿಮಿಟೆಡ್

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಮುಂಬೈ

ಮುಖ್ಯ ಕಚೇರಿ ಕಟ್ಟಡ

6ನೇ ಮಹಡಿ

MG ರಸ್ತೆ

ಫೋರ್ಟ್

ಫ್ಲೋರಾ ಫೌಂಟೇನ್

ಹುತಾತ್ಮ ಚೌಕ್

ಮುಂಬೈ-400 023

ಅಥವಾ ಇ-ಮೇಲ್ ಐಡಿ [email protected] ಗೆ ಕಳುಹಿಸಿ.

ಹಿಂದಿನ ಲೇಖನರೈಲ್ವೆ ಇಲಾಖೆಯಲ್ಲಿ 548 ಹುದ್ದೆಗಳಿಗೆ ಅರ್ಜಿ ಆಹ್ವಾನ
ಮುಂದಿನ ಲೇಖನಇಂದಿನಿಂದ ಮೂರು ದಿನ ನೂತನ ಸರ್ಕಾರದ ಮೊದಲ ಅಧಿವೇಶನ