ಮನೆ ರಾಜ್ಯ ಡಿಕೆಶಿ ವಿರುದ್ಧದ​ ಸಿಬಿಐ ಕೇಸ್ ವಾಪಸ್: ನ್ಯಾಯಾಲಯದಲ್ಲಿ ಪ್ರಶ್ನಿಸುತ್ತೇನೆ ಎಂದ ಬಸನಗೌಡ ಪಾಟೀಲ್​ ಯತ್ನಾಳ್

ಡಿಕೆಶಿ ವಿರುದ್ಧದ​ ಸಿಬಿಐ ಕೇಸ್ ವಾಪಸ್: ನ್ಯಾಯಾಲಯದಲ್ಲಿ ಪ್ರಶ್ನಿಸುತ್ತೇನೆ ಎಂದ ಬಸನಗೌಡ ಪಾಟೀಲ್​ ಯತ್ನಾಳ್

0

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ವಾಪಸ್​ ಪಡೆಯಲು ಸಚಿವ ಸಂಪುಟ ಒಪ್ಪಿಗೆ ನೀಡಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರವನ್ನು ರಾಜ್ಯ ಬಿಜೆಪಿ ನಾಯಕರು ಖಂಡಿಸಿದ್ದಾರೆ.

ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ ನಲ್ಲಿ,  ಪ್ರಕರಣವನ್ನು ಹಿಂಪಡೆದಿರುವುದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುತ್ತೇನೆ. ಭ್ರಷ್ಟಾಚಾರ ಪ್ರಕರಣ ಹಿಂಪಡೆಯುವ ನಿರ್ಧಾರವನ್ನು ಸರ್ಕಾರ ಮರು ಪರಿಶೀಲಿಸಬೇಕು ಎಂದು ಬರೆದಿದ್ದಾರೆ.

ಸರ್ಕಾರದ ಈ ತೀರ್ಮಾನ ಕಾನೂನು ಬಾಹಿರ: ಬಿ.ವೈ.ರಾಘವೇಂದ್ರ

ಸರ್ಕಾರದ ಈ ತೀರ್ಮಾನ ಕಾನೂನು ಬಾಹಿರ. ಹೈಕೋರ್ಟ್​​ ನಲ್ಲಿ ಇನ್ನೂ ಈ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಈ ಪ್ರಕರಣವನ್ನು ರಾಜಕೀಯಗೊಳಿಸುವ ಪ್ರಯತ್ನ ನಡೆಯುತ್ತಿದೆ. ಸಂವಿಧಾನ ಬದ್ಧ ಸಂಸ್ಥೆಯನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸುತ್ತಿದ್ದಾರೆ. ರಾಜ್ಯಕ್ಕೆ ಇದೊಂದು ಕೆಟ್ಟ ಸಂದೇಶ ರವಾನೆಯಾಗಿದೆ. ಇದನ್ನು ಸಮಾಜ ಮತ್ತು ನ್ಯಾಯಾಂಗ ಗಮನಿಸುತ್ತದೆ. ಪ್ರತಿರೋಧ ಬರುವ ತೀರ್ಪು ಬಂದರೇ ಅಚ್ಚರಿ ಪಡಬೇಕಿಲ್ಲ. ಕಾಂಗ್ರೆಸ್​ನವರು ತಪ್ಪುನ್ನು ಮುಚ್ಚಿಕೊಳ್ಳುವುದಕ್ಕೆ ಹೊರಟಿದ್ದಾರೆ ಎಂದು ಸಂಸದ ಬಿವೈ ರಾಘವೇಂದ್ರ ವಾಗ್ದಾಳಿ ನಡೆಸಿದ್ದಾರೆ.