ಮನೆ ರಾಜಕೀಯ ವಾಲ್ಮೀಕಿ ನಿಗಮದ ಹಗರಣದ ಬಗ್ಗೆ ಕೇಸ್ ದಾಖಲಿಸಿಕೊಂಡ ಸಿಬಿಐ: ರಾಜ್ಯ ಸರ್ಕಾರ ಎಲ್ಲ ರೀತಿಯ ಸಹಕಾರ...

ವಾಲ್ಮೀಕಿ ನಿಗಮದ ಹಗರಣದ ಬಗ್ಗೆ ಕೇಸ್ ದಾಖಲಿಸಿಕೊಂಡ ಸಿಬಿಐ: ರಾಜ್ಯ ಸರ್ಕಾರ ಎಲ್ಲ ರೀತಿಯ ಸಹಕಾರ ಕೋಡಲಿದೆ ಎಂದ ಜಿ ಪರಮೇಶ್ವರ

0

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ಎಫ್​ಐಆರ್ ದಾಖಲಿಸಿಕೊಂಡಿರುವ ಬಗ್ಗೆ ಗೃಹ ಸಚಿವ ಜಿ ಪರಮೇಶ್ವರ ಪ್ರತಿಕ್ರಿಯೆ ನೀಡಿದ್ದಾರೆ.

Join Our Whatsapp Group

ಬೆಂಗಳೂರಿನ ಸದಾಶಿವನಗರದ ನಿವಾಸದ ಬಳಿ ಮಾತನಾಡಿದ ಅವರು, ಸಿಬಿಐಗೆ ಬ್ಯಾಂಕ್​ನವರು ಪತ್ರ ಬರೆದಿದ್ದರು. ಮೂರು ಕೋಟಿ ರೂಪಾಯಿ ಮೊತ್ತಕ್ಕಿಂತ ಹಚ್ಚಿನ ಹಗರಣ ಆಗಿದ್ದರೆ ಸ್ವಯಂಪ್ರೇರಿತ ಕೇಸ್ ದಾಖಲಿಸಬಹುದು ಅಂತ ಕಾನೂನು ಇದೆ. ಅದರಂತೆ ಸಿಬಿಐ ಕೇಸ್ ತೆಗೆದುಕೊಂಡಿದೆ. ರಾಜ್ಯ ಸರ್ಕಾರ ಎಲ್ಲ ರೀತಿಯ ಸಹಕಾರ ಕೋಡಲಿದೆ ಎಂದರು.

ಸರ್ಕಾರದ ಇಲಾಖೆಗಳ ತನಿಖೆ ಮಾಡುವ ಬಗ್ಗೆ ನಿರ್ಧಾರ ಕೈಗೊಂಡಿಲ್ಲ. ಸಿಬಿಐ ಪತ್ರ ಬರೆದ ಮೇಲೆ ತೀರ್ಮಾನ ಮಾಡಬೇಕು. ಸರ್ಕಾರಕ್ಕೆ ಪತ್ರ ಬರೆದ ಮೇಲೆ ಸಚಿವರ ತನಿಖೆ ಬಗ್ಗೆ ನಿರ್ಧಾರ ಮಾಡುತ್ತೇವೆ. ಸಚಿವರನ್ನು ಕರೆದು ಸಿಬಿಐ ತನಿಖೆ ಮಾಡಬಹುದು. ಅಗತ್ಯ ಬಂದರೆ ಕೇಸ್ ಅನ್ನು ಸಿಬಿಐಗೆ ನಾವೇ ಕೋಡುತ್ತೇವೆ. ಮೊದಲು ಅವರು ಪತ್ರ ಬರೆಯಲಿ. ನಾವು ಕ್ಯಾಬಿನೆಟ್​​ನಲ್ಲಿ ನಿರ್ಧಾರ ಮಾಡುತ್ತೇವೆ ಎಂದು ಪರಮೇಶ್ವರ್ ಹೇಳಿದರು.

ಇನ್ನು ರಾಜ್ಯದಲ್ಲಿ ಲೋಕಸಭೆ ಚುನಾವಣೆ ಫಲಿತಾಂಶದ ಬಗ್ಗೆ ಮಾತನಾಡಿದ ಅವರು, ಬೇರೆ ಬೇರೆ ರೀತಿಯಲ್ಲಿ ಅಂದಾಜು ಮಾಡಿದ್ದೆವು. ಅದು ಏರುಪೇರು ಆಗಿದೆ. 50 ಸಾವಿರದ ಅಂತರದಲ್ಲಿ ಯಾರೆಲ್ಲ ಸೋತಿದ್ದಾರೆಯೋ ಆ ಕ್ಷೇತ್ರಗಳಲ್ಲಿ ಅಲ್ಲಿ ಇನ್ನಷ್ಟು ಎಫರ್ಟ್ ಹಾಕಬೇಕಿತ್ತು. ತುಮಕೂರನಲ್ಲಿ ಗೆಲ್ಲುವ ನಿರೀಕ್ಷೆ ಇತ್ತು. ಫಲಿತಾಂಶ ಏರುಪೇರು ಆಗಿದೆ ಎಂದರು.

ತುಮಕೂರಿನ ಸೋಲಿನ ಬಗ್ಗೆ ನಾನು ಮತ್ತು ರಾಜಣ್ಣ ನಾಯಕರಿಗೆ ಉತ್ತರ ಕೋಡುತ್ತೇವೆ. ಮೈತ್ರಿ ವರ್ಕೌಟ್ ಆಗಲ್ಲ ಅಂದುಕೊಂಡಿದ್ದೆವು. ತುಮಕೂರಿನಲ್ಲಿ ಇದು ವರ್ಕೌಟ್ ಆಗಿದೆ. ಕೆಲವು ಸಚಿವರಿಗೆ ಹಿನ್ನಡೆ ಆಗಿದೆ. ಅದನ್ನು ಒಪ್ಪಿಕೊಳ್ಳಲೇಬೇಕು ಎಂದರು.

ಐತಿಹಾಸಿಕವಾದ ಲೋಕಸಭಾ ಚುನಾವಣೆಯನ್ನು ವಿಶ್ವವೇ ಎದುರು ನೋಡುತ್ತಾ ಇತ್ತು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾವ ರೀತಿ ಚುನಾವಣೆ ಆಗುತ್ತದೆ ಎಂಬುದನ್ನು ವಿಶ್ವ ಗಮನಿಸುತ್ತಾ ಇತ್ತು. ದೇಶದ ಮತದಾರರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಕರ್ನಾಟಕದ ಮತದಾರರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಏಕ್ಸಿಟ್ ಪೋಲ್​​ಗಳಲ್ಲಿ ಫಲಿತಾಂಶ ಏಕಮುಖವಾಗಿದೆ ಎಂದು ಬಿಂಬಿಸಿದ್ದರು. ಆದರೆ, ಫಲಿತಾಂಶ ಬೇರೆ ತರಹ ಬಂದಿದೆ. ಮೋದಿ 400 ಸ್ಥಾನ ಗೆಲ್ಲುತ್ತಾರೆ ಎಂಬ ನೀರಿಕ್ಷೆ ಸುಳ್ಳಾಗಿದೆ. ಇಂಡಿಯಾ ಒಕ್ಕೂಟ ಹೆಚ್ಚು ಸೀಟ್ ಗೆದ್ದಿದೆ. ವಿರೋಧ ಪಕ್ಷ ಗಟ್ಟಿಯಾಗಿ‌ ಉಳಿಯತ್ತೆ ಅಂತ ತೋರಿಸಿದ್ದಾರೆ. ಮೋದಿಗೆ ಎಚ್ಚರಿಕೆ ಗಂಟೆ ಕೊಟ್ಟಿದ್ದಾರೆ. ಬಿಜೆಪಿಗೆ ಬಹುಮತ ಬಂದಿಲ್ಲ ಎಂದು ಪರಮೇಶ್ವರ್ ಹೇಳಿದರು.

ಕಾಂಗ್ರೆಸ್ ಒಕ್ಕೂಟ ಅಧಿಕಾರಕ್ಕೆ ಬರಲಿದೆಯೇ ಅಥವಾ ಬಿಜೆಪಿ ನೇತೃತ್ವದ ಎನ್​​ಡಿಎ ಒಕ್ಕೂಟ ಅಧಿಕಾರಕ್ಕೆ ಬರಲಿದೆಯೇ ಎಂಬ ಪ್ರಶ್ನೆಗೆ, ಇದಕ್ಕೆ ಕಾಲವೇ ಉತ್ತರಿಸಲಿದೆ ಎಂದರು.