ಮನೆ ಅಪರಾಧ ಲಾಲು ಪ್ರಸಾದ್ ಯಾದವ್​ಗೆ ಮತ್ತೆ ಸಂಕಷ್ಟ: 15 ಸ್ಥಳಗಳಲ್ಲಿ ಸಿಬಿಐ ದಾಳಿ

ಲಾಲು ಪ್ರಸಾದ್ ಯಾದವ್​ಗೆ ಮತ್ತೆ ಸಂಕಷ್ಟ: 15 ಸ್ಥಳಗಳಲ್ಲಿ ಸಿಬಿಐ ದಾಳಿ

0

ಪಾಟ್ನಾ(ಬಿಹಾರ): ಭ್ರಷ್ಟಾಚಾರ ಪ್ರಕರಣದಲ್ಲಿ ರಾಷ್ಟ್ರೀಯ ಜನತಾ ದಳದ (ಆರ್​ಜೆಡಿ) ನಾಯಕ ಲಾಲು ಪ್ರಸಾದ್ ಯಾದವ್​ಗೆ ಸಂಬಂಧಿಸಿದ 15 ಸ್ಥಳಗಳ ಮೇಲೆ ಕೇಂದ್ರೀಯ ತನಿಖಾ ದಳ (ಸಿಬಿಐ) ಇಂದು ದಾಳಿ ಮಾಡಿದ್ದು, ಶೋಧ ಕಾರ್ಯ ಮುಂದುವರೆಸಿದೆ.

ಮಾಹಿತಿ ಪ್ರಕಾರ, ಲಾಲು ಪ್ರಸಾದ್ ಯಾದವ್, ಅವರ ಪತ್ನಿ ರಾಬ್ರಿ ಮತ್ತು ಮಗಳು ಮಿಸಾಗೆ ಸಂಬಂಧಿಸಿದ ಸ್ಥಳಗಳೂ ಸೇರಿದಂತೆ ಬಿಹಾರ ಮತ್ತು ದೆಹಲಿಯ ಹಲವು ಸ್ಥಳಗಳಲ್ಲಿ ತನಿಖಾಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಲಾಲು 2004 ರಿಂದ 2009 ರವರೆಗೆ ರೈಲ್ವೆ ಸಚಿವರಾಗಿದ್ದರು. ಈ ಅವಧಿಯಲ್ಲಿ ಭಾರಿ ಅಕ್ರಮ ಎಸಗಿದ್ದಾರೆ ಎಂಬ ಗಂಭೀರ ಆರೋಪಗಳಿವೆ. ಲಾಲು ಮತ್ತು ಮಗಳ ವಿರುದ್ಧ ಹೊಸ ಪ್ರಕರಣ ದಾಖಲಾಗಿದೆ.

ಹಿಂದಿನ ಲೇಖನಬಿಳಿಗಿರಿರಂಗ ಬೆಟ್ಟದ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಾಣಿಸಿಕೊಂಡ ಕರಿ ಚಿರತೆ
ಮುಂದಿನ ಲೇಖನಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ​: ಕೆಲಕಾಲ ಆತಂಕ