ಮನೆ Uncategorized ತೆಲುಗು ನಟಿಯರು ಭಾಗಿಯಾಗಿದ್ದ ರೇವ್ ಪಾರ್ಟಿ ಮೇಲೆ ಸಿಸಿಬಿ ದಾಳಿ

ತೆಲುಗು ನಟಿಯರು ಭಾಗಿಯಾಗಿದ್ದ ರೇವ್ ಪಾರ್ಟಿ ಮೇಲೆ ಸಿಸಿಬಿ ದಾಳಿ

0

ಬೆಂಗಳೂರು: ನಗರದ ಎಲೆಕ್ಟ್ರಾನಿಕ್ ಸಿಟಿ ಬಳಿಯ G.R.ಫಾರ್ಮ್ ​​​ಹೌಸ್​​ ನಲ್ಲಿ ನಡೆಯುತ್ತಿದ್ದ ರೇವ್​​ ಪಾರ್ಟಿ ಮೇಲೆ ಸಿಸಿಬಿ ತಂಡ ದಾಳಿ ನಡೆಸಿದೆ.

Join Our Whatsapp Group

ಬೆಳಗಿನ ಜಾವ 3 ಗಂಟೆಯಲ್ಲಿ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು, ದಾಳಿ ವೇಳೆ ಪಾರ್ಟಿಯಲ್ಲಿ ಡ್ರಗ್ಸ್ ಪತ್ತೆಯಾಗಿದೆ. ಹಾಗೂ ಕೆಲ ತೆಲುಗು ನಟಿಯರು ಕೂಡ ಈ ಪಾರ್ಟಿಯಲ್ಲಿ ಭಾಗಿಯಾಗಿದ್ದರು ಎಂದು ತಿಳಿದುಬಂದಿದೆ.

ಕಾನ್ ಕಾರ್ಡ್ ಮಾಲೀಕ ಗೋಪಾಲ ರೆಡ್ಡಿ ಎಂಬುವವರ ಮಾಲಿಕತ್ವದ G.R.ಫಾರ್ಮ್​​​ಹೌಸ್​​ನಲ್ಲಿ ಹೈದ್ರಾಬಾದ್ ಮೂಲದ ವಾಸು ಎಂಬಾತ ಪಾರ್ಟಿ ಆಯೋಜನೆ ಮಾಡಿದ್ದ. ಬರ್ತಡೇ ಪಾರ್ಟಿ ಹೆಸರಿನಲ್ಲಿ ನಡೆಯುತ್ತಿದ್ದ ಈ ಪಾರ್ಟಿ ತಡರಾತ್ರಿ 2 ಗಂಟೆಯಾದ್ರೂ ಮುಗಿದಿರಲಿಲ್ಲ. ಅವಧಿ ಮೀರಿ ಪಾರ್ಟಿ ಮಾಡಲಾಗುತ್ತಿತ್ತು. ಹೀಗಾಗಿ ಸಿಸಿಬಿಯ ಆಂಟಿ ನಾರ್ಕೊಟಿಕ್ಸ್ ವಿಭಾಗದ ಅಧಿಕಾರಿಗಳು ದಾಳಿ ನಡೆಸಿದ್ದು ಪಾರ್ಟಿಯಲ್ಲಿ ಡ್ರಗ್ಸ್ ಪತ್ತೆಯಾಗಿದೆ.

ದಾಳಿ ವೇಳೆ 17 ಎಂಡಿಎಂಎ ಮಾತ್ರೆ, ಕೊಕೇನ್ ಪತ್ತೆಯಾಗಿದೆ. ಆಂಧ್ರ, ಬೆಂಗಳೂರು ಮೂಲದ 100ಕ್ಕೂ ಹೆಚ್ಚು ಜನ ಮತ್ತು 25ಕ್ಕೂ ಹೆಚ್ಚು ಯುವತಿಯರು ಪಾರ್ಟಿಯಲ್ಲಿ ಭಾಗಿಯಾಗಿದ್ದು ತಿಳಿದುಬಂದಿದೆ. ಆಯೋಜಕ ಪಾರ್ಟಿಗಾಗಿಯೇ ಆಂಧ್ರದಿಂದ ಫ್ಲೈಟ್ ನಲ್ಲಿ ಜನರನ್ನು ಕರೆಸಿಕೊಂಡಿದ್ದ. ಇನ್ನು ಅಚ್ಚರಿ ಎಂದರೆ ಒಂದು ಬೆಂಜ್ ಕಾರಿನಲ್ಲಿ ಆಂಧ್ರ ಶಾಸಕನ ಪಾಸ್ ಪತ್ತೆಯಾಗಿದೆ. ಎಂಎಲ್​ಎ ಕಾಕನಿ ಗೋವರ್ಧನರೆಡ್ಡಿ ಹೆಸರಿನ ಪಾಸ್ ಸಿಕ್ಕಿದೆ. ಜೊತೆಗೆ ದಾಳಿ ನಡೆದ ಫಾರ್ಮ್​​​ಹೌಸ್ ಬಳಿ ಮರ್ಸಿಡಿಸ್-ಬೆನ್ಜ್, ಜಾಗ್ವಾರ್, ಆಡಿ ಕಾರ್ ಸೇರಿದಂತೆ 15ಕ್ಕೂ ಹೆಚ್ಚು ಐಷಾರಾಮಿ ಕಾರುಗಳು ಪತ್ತೆಯಾಗಿವೆ. ಇನ್ನು ಈ ಪಾರ್ಟಿಯಲ್ಲಿ ಮಾಡೆಲ್​​ಗಳು ಹಾಗೂ ಟೆಕ್ಕಿಗಳು ಭಾಗಿಯಾಗಿದ್ದರು ಜೊತೆಗೆ ತೆಲುಗು ನಟಿಯರು ಕೂಡ ಭಾಗಿಯಾಗಿದ್ದರು. ಸದ್ಯ ಈ ಘಟನೆ ಸಂಬಂಧ ಎಲೆಕ್ಟ್ರಾನಿಕ್​​ಸಿಟಿ ಪೊಲೀಸ್​ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಭಾನುವಾರ ಸಂಜೆ ಐದು ಘಂಟೆಯಿಂದ ಬೆಳಗ್ಗೆ ಆರು ಘಂಟೆ ತನಕ ಈ ಪಾರ್ಟಿ ನಡೆಯಬೇಕಿತ್ತು. ಸದ್ಯ ಸಿಸಿಬಿ ಪೊಲೀಸರು ತಡರಾತ್ರಿ ದಾಳಿ ನಡೆಸಿ ಅಕ್ರಮ ಬಯಲಿಗೆಳೆದಿದ್ದಾರೆ.

ಪೊಲೀಸರು ಪಾರ್ಟಿಯಲ್ಲಿ ಭಾಗಿಯಾದವರ ಗುರುತು ಪತ್ತೆ ಮಾಡುತ್ತಿದ್ದಾರೆ.

ಹಿಂದಿನ ಲೇಖನಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2024: ಫ್ಯಾಕಲ್ಟಿ/ಆಫೀಸ್ ಅಸಿಸ್ಟೆಂಟ್ ಮತ್ತು ಕೌನ್ಸಿಲ್ ಅಥವಾ ಎಫ್‌ ಎಲ್‌ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಮುಂದಿನ ಲೇಖನರಾಜ್ಯದಲ್ಲಿ ಮೇ 22 ರವರೆಗು ಮಳೆ: 17 ಜಿಲ್ಲೆಗಳಿಗೆ ಅಲರ್ಟ್ ಘೋಷಣೆ