ಸಿಸಿಎಲ್ 10ನೇ ಸೀಸನ್ ಫೆಬ್ರವರಿ 23 ರಿಂದ ಶುರುವಾಗಲಿದೆ. ಮಾರ್ಚ್ 17 ರವರೆಗೆ ನಡೆಯಲ್ಲಿರುವ ಈ ಪಂದ್ಯಾವಳಿಯಲ್ಲಿ ಭಾರತದ ಎಂಟು ಚಲನಚಿತ್ರೋದ್ಯಮಗಳ ಕಲಾವಿದರು ಭಾಗಿಯಾಗಲಿದ್ದಾರೆ. ಒಟ್ಟು ಎಂಟು ತಂಡಗಳು ಯುಎಇ ಸೇರಿದಂತೆ ಭಾರತದ ಐದು ಸ್ಥಳಗಳಲ್ಲಿ 24 ದಿನಗಳ ಕಾಲ ಕ್ರಿಕೆಟ್ ಅಂಗಳದಲ್ಲಿ ಪ್ರಶಸ್ತಿಗಾಗಿ ಕಾದಾಡಲಿವೆ.
ಯುಎಇಯ ಶಾರ್ಜಾದಲ್ಲಿ ಲೀಗ್ ನ ಮೂರು ಪಂದ್ಯಗಳು ನಡೆಯಲ್ಲಿದ್ದು, ಆ ನಂತರ ಲೀಗ್ ಭಾರತಕ್ಕೆ ಕಾಲಿಡಲಿದೆ. ಭಾರತದ ಐದು ನಗರಗಳಾದ ಹೈದರಾಬಾದ್, ಬೆಂಗಳೂರು, ಚಂಡೀಗಢ, ತಿರುವನಂತಪುರ ಮತ್ತು ವೈಜಾಗ್‌ನಲ್ಲಿ ಉಳಿದ ಪಂದ್ಯಗಳು ನಡೆಯಲ್ಲಿವೆ. ವಾರಾಂತ್ಯದಲ್ಲಿ ದಿನಕ್ಕೆ ಎರಡು ಪಂದ್ಯಗಳು ನಡೆಯಲ್ಲಿವೆ.
ಉದ್ಘಾಟನಾ ಪಂದ್ಯದಲ್ಲಿ ಮುಂಬೈ ಹೀರೋಸ್ ಮತ್ತು ಕೇರಳ ಕೇರಳ ಸ್ಟ್ರೈಕರ್ಸ್ ತಂಡಗಳು ಮುಖಾಮುಖಿಯಾಗಲಿವೆ. ಕರ್ನಾಟಕ ಬುಲ್ಡೋಜರ್ಸ್ ಮೊದಲ ಪಂದ್ಯಾವಳಿ ಇದೇ 25ರಂದು ನಡೆಯುತ್ತಿದ್ದು, ಮುಂಬೈ ಹೀರೋಸ್ ಎದುರು ಸೆಣಸಾಡಲಿದೆ.
ತಂಡಗಳು ಹೀಗಿವೆ: ಮುಂಬೈ ಹೀರೋಸ್, ಕೇರಳ ಸ್ಟ್ರೆ „ಕರ್ಸ್, ತೆಲುಗು ವಾರಿಯರ್ಸ್, ಭೋಜ್‌ಫುರಿ ದಬಾಂಗ್ಸ್, ಕರ್ನಾಟಕ ಬುಲ್ಡೋಜರ್ಸ್, ಬೆಂಗಾಲ್ ಟೈಗರ್ಸ್, ಚೆನ್ನೈ ರೈನೋಸ್, ಪಂಜಾಬ್ ದಿ ಶೇರ್. ಇತ್ತೀಚೆಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಬುಲ್ಡೋಜರ್ಸ್ ತಂಡದ ಮಾಲೀಕ ಅಶೋಕ್ ಖೇಣಿ, ಸಿಸಿಎಲ್ ಸಂಸ್ಥಾಪಕ ವಿಷ್ಣು ಇಂದೋರಿ ಹಾಗೂ ಕ್ಯಾಪ್ಟನ್ ಪ್ರದೀಪ್ ಸೇರಿದಂತೆ ಇತರರು ಭಾಗಿಯಾಗಿದ್ದರು.