ಮನೆ ಅಪರಾಧ ಸಿಡಿ ಕೇಸ್: ಅರ್ಜಿಯ ವಿಚಾರಣೆ ಏಕ ಸದಸ್ಯ ಪೀಠಕ್ಕೆ ವರ್ಗಾವಣೆ

ಸಿಡಿ ಕೇಸ್: ಅರ್ಜಿಯ ವಿಚಾರಣೆ ಏಕ ಸದಸ್ಯ ಪೀಠಕ್ಕೆ ವರ್ಗಾವಣೆ

0

ಬೆಂಗಳೂರುಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್ಐಟಿ) ರಚನೆ ಮಾಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಹೊರಡಿಸಿದ ಆದೇಶ ರದ್ದು ಕೋರಿ ಸಲ್ಲಿಸಿದ್ದ ಪಿಐಎಲ್ ಅನ್ನು ಹೈಕೋರ್ಟ್ ವಿಲೇವಾರಿ ಮಾಡಿದೆ.

ಆದರೆ ಎಸ್ ಐ ಟಿ ರಚನೆ ಪ್ರಶ್ನಿಸಿ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಸಲ್ಲಿಸಿರುವ ಮತ್ತೊಂದು ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ಏಕಸದಸ್ಯ ಪೀಠಕ್ಕೆ ವರ್ಗಾಯಿಸಿದೆ.

ವಕೀಲೆ ಗೀತಾ ಮಿಶ್ರಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಾಗೂ ಸಂತ್ರಸ್ತೆ ಸಲ್ಲಿಸಿದ್ದ ಅರ್ಜಿ ಎರಡೂ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯಪೀಠದ ಮುಂದೆ ವಿಚಾರಣೆಗೆ ಬಂದವು. 

ವಿಚಾರಣೆ ನಡೆಸಿದ ನ್ಯಾಯಪೀಠ, ಎಸ್ ಐಟಿ ರಚನೆ ಪ್ರಶ್ನಿಸಿ ಪಿಐಎಲ್ ಹೂಡಲಾಗಿದೆ. ಆದರೆ ಸಂತ್ರಸ್ತೆಯೇ ಅದೇ ಎಸ್ಐಟಿ ರಚನೆ ಪ್ರಶ್ನಿಸಿ ಅರ್ಜಿ ಸಲ್ಲಿಸಿರುವ ಕಾರಣ ಪಿಐಎಲ್ ಅರ್ಜಿಯನ್ನು ಉಳಿಸಿಕೊಳ್ಳುವ ಅಗತ್ಯ ಏನೂ ಇಲ್ಲ ಎಂದು ಅಭಿಪ್ರಾಯಪಟ್ಟು ಇತ್ಯರ್ಥಪಡಿಸಿತು.

ಜೊತೆಗೆ ಸಂತ್ರಸ್ತೆ ಅರ್ಜಿಯನ್ನು ಏಕಸದಸ್ಯ ಪೀಠಕ್ಕೆ ವರ್ಗಾಯಿಸಿದ ವಿಭಾಗೀಯ ನ್ಯಾಯಪೀಠ, ಅರ್ಜಿಯನ್ನು ರೋಸ್ಟರ್ ಪ್ರಕಾರ ಸಂಬಂಧಪಟ್ಟ ನ್ಯಾಯಪೀಠ ಮುಂದೆಗೆ ವಿಚಾರಣೆಗೆ ನಿಗದಿಪಡಿಸಲು ಆದೇಶಿಸಿತು. ಸಂತ್ರಸ್ತೆಯು ಸಲ್ಲಿಸಿರುವ ಮತ್ತೊಂದು ಅರ್ಜಿಯನ್ನು ನ್ಯಾಯಪೀಠವೇ ವಿಚಾರಣೆ ಮುಂದುವರಿಸಲಿದೆ. ಅಲ್ಲದೆ, ನ್ಯಾಯಪೀಠ ಪಿಐಎಲ್ ಅಲ್ಲಿ ಸಲ್ಲಿಸಲಾಗಿರುವ ಅಗತ್ಯ ದಾಖಲೆಗಳನ್ನು ರೋಸ್ಟರ್ ನ್ಯಾಯಪೀಠಕ್ಕೆ ಒದಗಿಸುವ ಉದ್ದೇಶದಿಂದ ಪಿಐಎಲ್ ಅನ್ನು ಸಂತ್ರಸ್ತೆಯ ಅರ್ಜಿಯೊಂದಿಗೆ ಸೇರಿಸಬಹುದು ಎಂದು ತಿಳಿಸಿದೆ.

ಹಿಂದಿನ ಲೇಖನಬೇಲೂರಿನಲ್ಲಿ ಕಾಡಾನೆ ದಾಳಿ, ಇಬ್ಬರು ಬಲಿ
ಮುಂದಿನ ಲೇಖನಮುಂದುವರೆದ ಕಾಳ್ಗಿಚ್ಚು: ದಕ್ಷಿಣ ಕೊರಿಯಾದಲ್ಲಿ 24 ಸಾವಿರ ಹೆಕ್ಟೇರ್​ ಅರಣ್ಯ ನಾಶ