ಮನೆ ಸ್ಥಳೀಯ ಅರ್ಥಪೂರ್ಣವಾಗಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ: ಡಾ.ಪಿ ಶಿವರಾಜು

ಅರ್ಥಪೂರ್ಣವಾಗಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ: ಡಾ.ಪಿ ಶಿವರಾಜು

0

 ಮೈಸೂರು: ಅಕ್ಟೋಬರ್ 23 ರಂದು ರಂದು ಬೆಳಗ್ಗೆ 11.30  ಗಂಟೆಗೆ ಕರ್ನಾಟಕದ ಕಲಾಮಂದಿರದ ಕಿರುರಂಗಮoದಿರದಲ್ಲಿ “ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ” ಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿಗಳಾದ ಡಾ.ಪಿ ಶಿವರಾಜು ಅವರು ತಿಳಿಸಿದರು.

Join Our Whatsapp Group

 ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ “ಕಿತ್ತೂರು ರಾಣಿ ಚೆನ್ನಮ್ಮ”  ಜಯಂತಿಯ ಆಚರಣೆಯ ಸಂಬಂಧ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕರ್ನಾಟಕದ ಅಸ್ಮಿತೆಯಾಗಿರುವ ರಾಣಿ ಚೆನ್ನಮ್ಮನವರ ಜಯಂತಿಯನ್ನು  ಆಚರಿಸುವ ಮೂಲಕ ಮಹಿಳೆಯರಿಗೆ ಹಾಗೂ ಸಮಾಜಕ್ಕೆ ಅವರ ಆದರ್ಶಗಳನ್ನು ತಿಳಿಸಬೇಕು. ಈ ರೀತಿಯ ಜಯಂತಿಗಳ ಆಚರಣೆಯಿಂದ ಜನರಿಗೆ ಒಳ್ಳೆಯ ಸಂದೇಶಗಳನ್ನು ನೀಡುವ ಕೆಲಸವಾಗುತ್ತದೆ ಎಂದರು.

 ಸರ್ಕಾರದ ಶಿಷ್ಟಾಚಾರದಂತೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಈ ಸಂಬoಧ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಮಾಡಲು ಅಗತ್ಯ ಕ್ರಮ ವಹಿಸಿ, ಜಯಂತಿ ನಡೆಯುವ ಸ್ಥಳದ ಸ್ವಚ್ಚತೆ, ಕುಡಿಯುವ ನೀರಿನ ವ್ಯವಸ್ಥೆ, ಶಾಮಿಯಾನ ವ್ಯವಸ್ಥೆ ಮಾಡಲು ಮಹಾನಗರ ಪಾಲಿಕೆಯ ಅಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸಭೆಯಲ್ಲಿ ಸೂಚಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ಎಂ. ಡಿ ಸುದರ್ಶನ್ ಅವರು ಮಾತನಾಡಿ, ಕಾರ್ಯಕ್ರಮದಲ್ಲಿ ಕಲಾತಂಡಗಳಿಂದ ಗೀತ ಗಾಯನವನ್ನು ಏರ್ಪಡಿಸಲಾಗುವುದು. ಆಹ್ವಾನ ಪತ್ರಿಕೆಯ ಮುದ್ರಣ ಮಾಡಿ ಸರ್ಕಾರದ ಶಿಷ್ಟಾಚಾರದಂತೆ ಜನ ಪ್ರತಿನಿಧಿಗಳನ್ನು ಆಹ್ವಾನಿಸಲಾಗುವುದು. ಈ ಸಂಬoಧ ಸಮಿತಿಯವರು ಸಹಕರಿಸಬೇಕು ಎಂದು ತಿಳಿಸಿದರು.

 ಸಭೆಯಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಸೇರಿದಂತೆ ಕಿತ್ತೂರು ರಾಣಿ ಚೆನ್ನಮ್ಮ  ಸಮುದಾಯದ  ಮುಖಂಡರುಗಳು ಉಪಸ್ಥಿತರಿದ್ದರು.