ಮನೆ ಸುದ್ದಿ ಜಾಲ ಅರ್ಥ ಪೂರ್ಣವಾಗಿ ವಿಜೃಂಭಣೆಯಿಂದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜಯಂತಿ ಆಚರಣೆ: ಡಾ. ಕೆ ವಿ...

ಅರ್ಥ ಪೂರ್ಣವಾಗಿ ವಿಜೃಂಭಣೆಯಿಂದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜಯಂತಿ ಆಚರಣೆ: ಡಾ. ಕೆ ವಿ ರಾಜೇಂದ್ರ

0

ಮೈಸೂರು: ಮೈಸೂರು ನಿರ್ಮಾಣಕ್ಕೆ ತಮ್ಮದೇ ಆದ ವಿಶೇಷ ಕೊಡುಗೆ ನೀಡಿದ ಮೈಸೂರು ಅರಸರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜಯಂತಿಯನ್ನು ಎಲ್ಲರೂ ಸೇರಿ ವಿಜೃಂಭಣೆಯಿಂದ ಅರ್ಥಪೂರ್ಣವಾಗಿ ಆಚರಣೆ ಮಾಡೋಣ ಎಂದು ಜಿಲ್ಲಾಧಿಕಾರಿಗಳಾದ ಕೆ.ವಿ ರಾಜೇಂದ್ರ ಅವರು ತಿಳಿಸಿದರು.

Join Our Whatsapp Group

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ  ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಆಚರಣೆ ಸಂಬಂಧ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜೂನ್ 04 ರಂದು ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಆಚರಣೆ ಮಾಡಲಾಗುತ್ತದೆ. ಈ ಹಿಂದೆ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿಯನ್ನು ಮೈಸೂರು ಜಿಲ್ಲೆಯಲ್ಲಿ ರಾಜ್ಯ ಮಟ್ಟದ ಕಾರ್ಯಕ್ರಮ ವಾಗಿ ಆಚರಣೆ ಮಾಡಲಾಗುತ್ತಿತ್ತು. ಆದರೆ ಈ ವರ್ಷ ರಾಜ್ಯ ಮಟ್ಟದ ಕಾರ್ಯಕ್ರಮವನ್ನು  ಮಂಡ್ಯ ಜಿಲ್ಲೆಯಲ್ಲಿ ಆಚರಣೆ ಮಾಡಲಾಗುತ್ತಿದೆ. ಮೈಸೂರು ಜಿಲ್ಲೆಯಲ್ಲಿ ಜಿಲ್ಲಾ ಮಟ್ಟದ ಕಾರ್ಯಕ್ರಮವಾಗಿ ಆಚರಣೆ ಮಾಡಲಾಗುತ್ತಿದೆ ಎಂದರು.

ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಕೃಷ್ಣರಾಜ ಸಾಗರ ಅಣೆಕಟ್ಟೆಯನ್ನು ನಿರ್ಮಾಣ ಮಾಡಿದರು. ಅರಮನೆಯಿಂದ ಮೆರವಣಿಗೆ ಬಂದು ಕಲಾಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ಆಯೋಜಿಸಲಾಗುವುದು. ನಾಲ್ವಡಿ ಕೃಷ್ಣರಾಜ ಒಡೆಯರ್ ಬಗ್ಗೆ ವಿಶೇಷ ಉಪನ್ಯಾಸ ನೀಡಲಾಗುವುದು ಎಂದರು.

ಸಮುದಾಯದ ಮುಖಂಡರು ಮಾತನಾಡಿ ನಾಲ್ವಡಿ ಕೃಷ್ಣರಾಜ ಒಡೆಯರ ಬಗ್ಗೆ ಹಾಗೂ ರಾಣಿ ಕೆಂಪರಾಜಮ್ಮಣಿ ಅವರ ವಿಚಾರಧಾರೆಗಳನ್ನು ಜನರಿಗೆ ತಿಳಿಸಲು ವಿಚಾರ ಸಂಕಿರಣ ಏರ್ಪಡಿಸಬೇಕು. ಮೈಸೂರು ರಾಜರ ಇತಿಹಾಸ ತಿಳಿಸುವ ಡಾಕ್ಯುಮೆಂಟರಿ ಇದ್ದು ಇದನ್ನು ಶಾಲಾ ಕಾಲೇಜು ಮಕ್ಕಳಿಗೆ ತೋರಿಸುವ ಕೆಲಸ ಆಗಬೇಕು.  ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿಗೆ ಸರ್ಕಾರಿ ರಜೆ ಎಂದು ಘೋಷಣೆ ಮಾಡಬೇಕು ಎಂದು ಮನವಿ ಮಾಡಿದರು. ನಾಲ್ವಡಿ ಕೃಷ್ಣರಾಜ ಒಡೆಯರ್ ಭವನ ನಿರ್ಮಾಣ ಮಾಡಬೇಕು.

ಮೆರವಣಿಗೆಗೆ ಕಲಾತಂಡಗಳನ್ನು ನೀಡಬೇಕು. ನಾಲ್ವಡಿ ಕೃಷ್ಣರಾಜ ಒಡೆಯರ್ ಬಗ್ಗೆ ವಿಶೇಷ ಚಿತ್ರಕಲಾ ಸ್ಪರ್ಧೆ ಆಯೋಜಿಸಬೇಕು. ಪಠ್ಯ ಪುಸ್ತಕಗಳಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಇತಿಹಾಸ ಹಾಗೂ ವಿಚಾರಧಾರೆಗಳನ್ನು ಅಳವಡಿಸಬೇಕು ಎಂದು ಮನವಿ ಮಾಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ. ಗಾಯತ್ರಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ರಾಮಚಂದ್ರ ಅರಸ್ , ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೆ ಎಂ ಸುದರ್ಶನ್ , ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕರಾದ ಟಿ.ಕೆ.ಹರೀಶ್ ಸೇರಿದಂತೆ ಸಮುದಾಯದ ಮುಖಂಡರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥತರಿದ್ದರು.

ಹಿಂದಿನ ಲೇಖನಮೆಟ್ರಿಕ್ ಪೂರ್ವ ಬಾಲಕ/ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶ: ಅರ್ಜಿ ಆಹ್ವಾನ
ಮುಂದಿನ ಲೇಖನಕಾರಂಜಿ ಆಂಜನೇಯಸ್ವಾಮಿ ದೇವಾಲಯ