ಮನೆ ಸ್ಥಳೀಯ ಅರ್ಥಪೂರ್ಣವಾಗಿ ನುಲಿಯ ಚಂದಯ್ಯ ಹಾಗೂ ಬ್ರಹ್ಮ ಶ್ರೀ ನಾರಾಯಣಗುರು ಜಯಂತಿ ಆಚರಣೆ: ಕವಿತಾ ರಾಜಾರಾಮ್

ಅರ್ಥಪೂರ್ಣವಾಗಿ ನುಲಿಯ ಚಂದಯ್ಯ ಹಾಗೂ ಬ್ರಹ್ಮ ಶ್ರೀ ನಾರಾಯಣಗುರು ಜಯಂತಿ ಆಚರಣೆ: ಕವಿತಾ ರಾಜಾರಾಮ್

0

ಮೈಸೂರು: ಬ್ರಹ್ಮಶ್ರೀ ನಾರಾಯಣಗುರು ಹಾಗೂ ನುಲಿಯ ಚಂದಯ್ಯ ರ ಜಯಂತಿಗಳನ್ನು ಅರ್ಥಪೂರ್ಣವಾಗಿ ಬೇರೆ ಬೇರೆ ದಿನಗಳಲ್ಲಿ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿಗಳಾದ ಕವಿತಾ ರಾಜಾರಾಮ್ ಅವರು ತಿಳಿಸಿದರು.


ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ನುಲಿಯ  ಚಂದಯ್ಯ ಹಾಗೂ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆಗಳ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮೈಸೂರು ಜಿಲ್ಲಾಡಳಿತ ವತಿಯಿಂದ ಆಗಸ್ಟ್ 31 ರಂದು ನಗರದ ಕಲಾ ಮಂದಿರದಲ್ಲಿ ಬ್ರಹ್ಮ ಶ್ರೀ ನಾರಾಯಣಗುರು ಅವರ ಜಯಂತಿಯನ್ನು ಆಚರಿಸಲಾಗುವುದು. ನುಲಿಯ ಚಂದಯ್ಯ ಜಯಂತಿ ಆಚರಣೆಗೆ ಸಂಬoಧಿಸಿದoತೆ ಸಮುದಾಯದ ಮುಖಂಡರು ಸಮಾಯಾವಕಾಶ ಕೇಳಿರುವುದರಿಂದ ಮುಂದೆ ದಿನಾಂಕ ತಿಳಿಸಲಾಗುವುದು ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ಎಂ.ಡಿ. ಸುದರ್ಶನ್ ಅವರು ಮಾತನಾಡಿ, ಬ್ರಹ್ಮಶ್ರೀ ನಾರಾಯಣಗುರು ಜಯಂತಿಯ ವೇದಿಕೆ ಕಾರ್ಯಕ್ರಮವನ್ನು ಆಗಸ್ಟ್ 31 ರಂದು ಮಧ್ಯಾಹ್ನ 03 ಗಂಟೆಗೆ ಕರ್ನಾಟಕ ಕಲಾಮಂದಿರದಲ್ಲಿ ಹಮ್ಮಿಕೊಳ್ಳಲಾಗುವುದು. ಕಾರ್ಯಕ್ರಮಕ್ಕೆ ಸಂಬoಧಿಸಿದoತೆ ಉಳಿದ ಅಂಶಗಳನ್ನು ಜಿಲ್ಲಾ ಶಿಷ್ಟ್ಟಾಚಾರದಂತೆ ನಡೆಸಲಾಗುವುದು ಎಂದು ತಿಳಿಸಿದರು.
ಸಮುದಾಯದ ಮುಖಂಡರುಗಳು ನುಲಿಯ ಚಂದಯ್ಯ ಜಯಂತಿಗೆ ಉಪನ್ಯಾಸಕರಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ಟಿ ಕೆ ಹರೀಶ್ ಅವರನ್ನು ಹಾಗೂ ಬ್ರಹ್ಮಶ್ರೀ ನಾರಾಯಣಗುರು ಜಯಂತಿಗೆ ಮಮತೇಶ್ ಕಡೂರು ಅವರ ಹೆಸರನ್ನು ಸೂಚಿಸಿದರು. ಜಯಂತಿಗಳಿಗೆ ವ್ಯಾಪಕ ಪ್ರಚಾರ ನೀಡುವಂತೆ ವಾರ್ತಾ ಇಲಾಖೆಗೆ ಸೂಚಿಸಬೇಕು ಎಂದು ಮನವಿ ಮಾಡಿದರು. ನಗರದ ಒಂದು ರಸ್ತೆಗೆ ನುಲಿಯ ಚಂದಯ್ಯ ನವರ ಹೆಸರನ್ನು ನಾಮಕರಣ ಮಾಡುವಂತೆ ಸಮುದಾಯದ ಮುಖಂಡರು ಸಭೆಯಲ್ಲಿ ಮನವಿ ಮಾಡಿದರು.
ಸಭೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು, ಹುಣಸೂರಿನ ತಾಲ್ಲೂಕಿನ ಕಾಯಕ ಸಮಾಜದ ಅಧ್ಯಕ್ಷರಾದ ಟಿ.ಕೆ ಹೊನ್ನಪ್ಪ, ನುಲಿಯ ಚಂದಯ್ಯ ಸಮುದಾಯದ ಮುಖಂಡರಾದ ರುಕ್ಮಂದ, ರಾಮಶೆಟ್ಟಿ, ಮೋಹನ್ ರಾಜ್ ಹಾಗೂ ಬ್ರಹ್ಮಶ್ರೀ ಸಮುದಾಯದ ಮುಖಂಡರಾದ ರಾಜ ಶೇಖರ್ ಕದಂಬ, ಕೃಷ್ಣಮೂರ್ತಿ, ದೇವದಾಸ್ ಸಿ. ಜಯರಾಜ್ ಸೇರಿದಂತೆ ವಿವಿಧ ಸಮುದಾಯಗಳ ಮುಖಂಡರು ಉಪಸ್ಥಿತರಿದ್ದರು.

ಹಿಂದಿನ ಲೇಖನರಾಜ್ಯದಲ್ಲಿ ಪ್ಯಾಕ್ಟ್ ಚೆಕ್ ಘಟಕ ರಚನೆಗೆ  ಮುಖ್ಯಮಂತ್ರಿ ಸಿದ್ದರಾಮಯ್ಯ  ಅನುಮೋದನೆ
ಮುಂದಿನ ಲೇಖನಹಾಸ್ಯ