ಮನೆ ಸುದ್ದಿ ಜಾಲ ಸಂಭ್ರಮದಿಂದ ಬಕ್ರೀದ್‌ ಹಬ್ಬ ಆಚರಣೆ

ಸಂಭ್ರಮದಿಂದ ಬಕ್ರೀದ್‌ ಹಬ್ಬ ಆಚರಣೆ

0

ಮೈಸೂರು (Mysuru): ತ್ಯಾಗ, ಬಲಿದಾನದ ಸಂಕೇತವಾದ ಬಕ್ರೀದ್‌ ಹಬ್ಬವನ್ನು ನಾಡಿನಲ್ಲೆಡೆ ಸಂಭ್ರಮ, ಸಡಗರದಿಂದ ಆಚರಿಸಲಾಗುತ್ತಿದೆ. ಮೈಸೂರಿನಲ್ಲೂ ಬಕ್ರೀದ್‌ ಹಬ್ಬ ಆಚರಿಸಲಾಗಿದೆ.

ನಗರದ ಈದ್ಗಾ ಮೈದಾನದಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದಾರೆ. ಸಾಮೂಹಿಕ ಪ್ರಾರ್ಥನೆಯಲ್ಲಿ ಸಾವಿರಾರು ಮುಸ್ಲಿಂ ಭಾಂದವರು ಭಾಗಿಯಾಗಿದ್ದರು. ಅಲ್ಲದೆ, ವಿವಿಧ ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಪರಸ್ಪರ ಆಲಂಗಿಸಿ, ಶುಭಾಶಯ ವಿನಿಮಯ ಮಾಡಿಕೊಂಡರು.

ಕಳೆದ ಬಾರಿ ಕೋವಿಡ್‌ ನಿಂದಾಗಿ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ನೀಡಿರಲಿಲ್ಲ. ಈ ಬಾರಿ ಕೋವಿಡ್‌ ನಿಯಂತ್ರಣದಲ್ಲಿರುವುದರಿಂದ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ಮಾಡಿಕೊಡಲಾಗಿತ್ತು.