ಬೆಂಗಳೂರು (Bengaluru)-ರಾಜ್ಯಾದ್ಯಂತ ಮುಸ್ಲಿಮರು ಇಂದು ಪವಿತ್ರ ಹಬ್ಬ ಈದುಲ್ ಫಿತ್ರ್ (ರಂಜಾನ್) ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸುತ್ತಿದ್ದಾರೆ. ಮುಸ್ಲಿಂ ಬಾಂಧವರಿಗೆ ದೇಶದ್ಯಾಂತ ಗಣ್ಯರು ಶುಭಕೋರುತ್ತಿದ್ದಾರೆ.
ಮುಸ್ಲಿಮರ ಪವಿತ್ರ ಹಾಗೂ ದೊಡ್ಡ ಹಬ್ಬಗಳಲ್ಲಿ ರಂಜಾನ್ ಮೊದಲನೆಯದು. ಈ ಹಬ್ಬವು ಹೆಚ್ಚಿನ ಪ್ರಾಮುಖ್ಯತೆಯನ್ನು ಹೊಂದಿದೆ. ಪ್ರವಾದಿ ಮುಹಮ್ಮದ್ ಈ ತಿಂಗಳು ಪವಿತ್ರ ಕುರಾನ್‌ನ ಬಹಿರಂಗಪಡಿಸಿದರು ಎಂದು ನಂಬಲಾಗಿದೆ.
ಪವಿತ್ರ ರಂಜಾನ್ನಲ್ಲಿ ಒಂದು ತಿಂಗಳ ಉಪವಾಸ ಮಾಡುವ ಮೂಲಕ ನಮ್ಮ ಸಂಬಂಧ ದೇವರ ಜೊತೆ ಮತ್ತಷ್ಟು ಗಟ್ಟಿಯಾಗುತ್ತೆ. ದೇವರಿಗೆ ಹತ್ತಿರವಾಗಲು ಸಹಾಯ ಮಾಡುತ್ತೆ ಎಂದು ಮುಸ್ಲಿಮರು ನಂಬುತ್ತಾರೆ. ಈ ತಿಂಗಳಲ್ಲಿ ಉಪವಾಸ ಮಾಡಿದ್ರೆ ಕಷ್ಟಸಂಕಷ್ಟಗಳು ಕಡಿಮೆಯಾಗುತ್ತವೆ ಎಂದು ಕೆಲವರು ನಂಬುತ್ತಾರೆ. ಈ ತಿಂಗಳಲ್ಲಿ ಮುಸ್ಲಿಮರು ಬಡವರಿಗೆ ದಾನ-ಧರ್ಮ ಮಾಡುವುದು ಹಾಗೂ ಹಸಿದವರಿಗೆ ಆಹಾರ ನೀಡುವಂಥ ಪುಣ್ಯ ಕಾರ್ಯಗಳನ್ನು ಮಾಡುತ್ತಾರೆ.
ಈದ್-ಉಲ್-ಫಿತರ್ ಇಸ್ಲಾಮಿಕ್ ಪ್ರವಾದಿ ಮುಹಮ್ಮದ್ ಅವರಿಂದ ಹುಟ್ಟಿಕೊಂಡಿತು ಎನ್ನಲಾಗಿದೆ. ಕೆಲವು ಸಂಪ್ರದಾಯಗಳ ಪ್ರಕಾರ, ಮೆಕ್ಕಾದಿಂದ ಮುಹಮ್ಮದ್ ವಲಸೆ ಬಂದ ನಂತರ ಈ ಹಬ್ಬಗಳನ್ನು ಮದೀನಾದಲ್ಲಿ ಪ್ರಾರಂಭಿಸಲಾಯಿತು. ಇಸ್ಲಾಮಿಕ್ ಪ್ರವಾದಿಯ ಪ್ರಸಿದ್ಧ ಒಡನಾಡಿಯಾದ ಅನಸ್, ಮುಹಮ್ಮದ್ ಮದೀನಾಕ್ಕೆ ಆಗಮಿಸಿದಾಗ, ಜನರು ಎರಡು ನಿರ್ದಿಷ್ಟ ದಿನಗಳನ್ನು ಆಚರಿಸುವುದನ್ನು ಕಂಡುಕೊಂಡರು. ಈದ್-ಉಲ್-ಫಿತರ್ ಮತ್ತು ಈದ್-ಅಲ್-ಅಧಾ. ಇನ್ನು ಈ ಹಬ್ಬಕ್ಕೆ ಅದರದೇ ಆದ ಮಹತ್ವ ಇದೆ. ಈ ತಿಂಗಳಲ್ಲಿ ಆಚರಿಸುವ ಆಚರಣೆಗಳು ಮಹತ್ವದ ವೈಜ್ಞಾನಿಕ ಕಾರಣಗಳನ್ನು ಒಳಗೊಂಡಿವೆ.