ಮನೆ ರಾಜ್ಯ ಸೋಮವಾರದ ಒಳಗೆ ಬರ ಪರಿಹಾರ ಬಿಡುಗಡೆ ಕೇಂದ್ರ ಸರ್ಕಾರ ಒಪ್ಪಿಗೆ

ಸೋಮವಾರದ ಒಳಗೆ ಬರ ಪರಿಹಾರ ಬಿಡುಗಡೆ ಕೇಂದ್ರ ಸರ್ಕಾರ ಒಪ್ಪಿಗೆ

0

ನವದೆಹಲಿ/ಬೆಂಗಳೂರು: ಸೋಮವಾರದ (ಏ.29)ರ ಒಳಗೆ ಬರ ಪರಿಹಾರ  ಬಿಡುಗಡೆ ಮಾಡುತ್ತೇವೆ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ​ಗೆ ಹೇಳಿದೆ.

Join Our Whatsapp Group

ಕರ್ನಾಟಕಕ್ಕೆ ಬರ ಪರಿಹಾರ ನಿಧಿ ಬಂದಿಲ್ಲ, ಹೀಗಾಗಿ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ರಾಜ್ಯ ಕಾಂಗ್ರೆಸ್​ ಸರ್ಕಾರ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿದೆ. ಸುಪ್ರೀಂಕೋರ್ಟ್​ನ ನ್ಯಾ.ಬಿ.ಆರ್.ಗವಾಯಿ ನೇತೃತ್ವದ ದ್ವಿಸದಸ್ಯ ಪೀಠ ಇಂದು (ಏ.22) ಅರ್ಜಿ ವಿಚಾರಣೆ ನಡೆಸಿತು. ಕೇಂದ್ರ ಸರ್ಕಾರದ ಪರ ಅಟಾರ್ನಿ ಜನರಲ್​​​​ ವೆಂಕಟರಮಣಿ ವಾದ ಮಂಡಿಸಿದರು.

ಬರ ಪರಿಹಾರ ಸಂಬಂಧ ಚುನಾವಣಾ ಆಯೋಗದ ಅನುಮತಿ ಕೇಳಿದ್ದೇವೆ. ಕೆಲವೇ ದಿನಗಳಲ್ಲಿ ಸಮಸ್ಯೆ ಬಗೆಹರಿಯಬಹುದು. ಸೋಮವಾರದ ಒಳಗೆ ಬರ ಪರಿಹಾರ ಬಿಡುಗಡೆ ಮಾಡುತ್ತೇವೆ ಎಂದು ಕೇಂದ್ರ ಸರ್ಕಾರದ ಪರ ಅಟಾರ್ನಿ ಜನರಲ್​​​​ ವೆಂಕಟರಮಣಿ ನ್ಯಾಯ ಪೀಠಕ್ಕೆ ಹೇಳಿದರು. ಇನ್ನು ಹಿರಿಯ ವಕೀಲರ ಅಲಭ್ಯತೆ ಹಿನ್ನೆಲೆಯಲ್ಲಿ ವಿಚಾರಣೆ ಮುಂದೂಡುವಂತೆ ರಾಜ್ಯ ಸರಕಾರದ ಪರ ವಕೀಲರು ಕೇಳಿಕೊಂಡ‌ರು. ವಾದ-ಪ್ರತಿವಾದವನ್ನು ಆಲಿಸಿದ ದ್ವಿಸದಸ್ಯ ನ್ಯಾಯಪೀಠ ವಿಚಾರಣೆಯನ್ನು ಏಪ್ರಿಲ್​ 29ಕ್ಕೆ ಮುಂದೂಡಿತು.