ಮನೆ ರಾಷ್ಟ್ರೀಯ ಟಿಆರ್​​’ಎಫ್’ನನ್ನು ಉಗ್ರ ಸಂಘಟನೆ ಎಂದು ಘೋಷಿಸಿದ ಕೇಂದ್ರ ಸರ್ಕಾರ

ಟಿಆರ್​​’ಎಫ್’ನನ್ನು ಉಗ್ರ ಸಂಘಟನೆ ಎಂದು ಘೋಷಿಸಿದ ಕೇಂದ್ರ ಸರ್ಕಾರ

0

ದೆಹಲಿ(Delhi): ಪಾಕಿಸ್ತಾನ ಮೂಲದ ಟಿಆರ್’​​ಎಫ್ ಸಂಘಟನೆಯನ್ನು ಉಗ್ರ ಸಂಘಟನೆ ಎಂದೂ ಸಂಘಟನೆಯ ಕಮಾಂಡರ್ ಶೇಖ್ ಸಜ್ಜದ್ ಗುಲ್‌’ನನ್ನು ಉಗ್ರನೆಂದು ಕೇಂದ್ರ ಗೃಹ ಇಲಾಖೆ ಘೋಷಿಸಿದೆ.

ಗೃಹ ವ್ಯವಹಾರಗಳ ಸಚಿವಾಲಯ ಪಾಕಿಸ್ತಾನ ಮೂಲದ ಲಷ್ಕರ್-ಎ-ತೊಯ್ಬಾ ನಿಷೇಧಿತ ಭಯೋತ್ಪಾದಕ ಸಂಘಟನೆಯ ಶಾಖೆಯಾದ ದಿ ರೆಸಿಸ್ಟೆನ್ಸ್ ಫ್ರಂಟ್ ಮತ್ತು ಅದರ ಅಡಿ ಇರುವ ಇತರೆ ಸಂಘಟನೆಗಳನ್ನು ನಿಷೇಧಿಸಿದೆ.

ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ 1967 ರ ಅಡಿಯಲ್ಲಿ ಸಚಿವಾಲಯವು ಅವುಗಳನ್ನು ಭಯೋತ್ಪಾದಕ ಸಂಘಟನೆಗಳೆಂದು ಘೋಷಿಸಿದೆ. ಕಾಶ್ಮೀರ ಪಂಡಿತರ ಹತ್ಯೆಗೆ ಟಿಆರ್’​ಎಫ್​ ಉಗ್ರ ಸಂಘಟನೆ ಬೆದರಿಕೆ ಹಾಕಿತ್ತು.

 “TRFನ ಚಟುವಟಿಕೆಗಳು ಭಾರತದ ರಾಷ್ಟ್ರೀಯ ಭದ್ರತೆ ಮತ್ತು ಸಾರ್ವಭೌಮತೆಗೆ ಹಾನಿಕಾರಕವಾಗಿದೆ” ಎಂದು ಉಲ್ಲೇಖಿಸಿ ಗೃಹ ವ್ಯವಹಾರಗಳ ಸಚಿವಾಲಯವು ಅಧಿಸೂಚನೆಯ ಮೂಲಕ ಘೋಷಣೆ ಮಾಡಿದೆ.

ಅಧಿಸೂಚನೆಯ ಪ್ರಕಾರ, ದಿ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್‌’ಎಫ್) ಭಯೋತ್ಪಾದಕ ಚಟುವಟಿಕೆಗಳನ್ನು ಹೆಚ್ಚಿಸಲು, ಭಯೋತ್ಪಾದಕರ ನೇಮಕಾತಿ, ಭಯೋತ್ಪಾದಕರ ಒಳನುಸುಳುವಿಕೆ ಮತ್ತು ಪಾಕಿಸ್ತಾನದಿಂದ ಜಮ್ಮು ಮತ್ತು ಕಾಶ್ಮೀರಕ್ಕೆ ಶಸ್ತ್ರಾಸ್ತ್ರಗಳ ಪೂರೈಕೆ ಮತ್ತು ಮಾದಕವಸ್ತುಗಳ ಕಳ್ಳಸಾಗಣೆಗಾಗಿ ಆನ್‌’ಲೈನ್ ಮಾಧ್ಯಮದ ಮೂಲಕ ಯುವಕರನ್ನು ನೇಮಿಸಿಕೊಳ್ಳುತ್ತಿದೆ.

1967 ರ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯ ನಾಲ್ಕನೇ ಶೆಡ್ಯೂಲ್ ಅಡಿಯಲ್ಲಿ TRFನ ಕಮಾಂಡರ್ ಶೇಖ್ ಸಜ್ಜದ್ ಗುಲ್’​ನನ್ನು ಭಯೋತ್ಪಾದಕ ಎಂದು ಘೋಷಿಸಲಾಗಿದೆ. ಲಷ್ಕರ್-ಎ-ತೊಯ್ಬಾದ ಪ್ರಾಕ್ಸಿ ಸಂಘಟನೆಯಾಗಿ 2019 ರಲ್ಲಿ ಅಸ್ತಿತ್ವಕ್ಕೆ ಬಂದ TRF, ಮತ್ತಷ್ಟು ಭಯೋತ್ಪಾದಕ ಚಟುವಟಿಕೆಗಳಿಗೆ ಆನ್‌ಲೈನ್ ಮಾಧ್ಯಮವನ್ನು ಬಳಸಿಕೊಂಡು ಯುವಕರನ್ನು ನೇಮಿಸಿಕೊಳ್ಳುತ್ತಿದೆ ಎಂದು ಸಚಿವಾಲಯವು ತಿಳಿಸಿದೆ.

ಭದ್ರತಾ ಪಡೆ ಸಿಬ್ಬಂದಿ ಮತ್ತು ಜಮ್ಮು ಮತ್ತು ಕಾಶ್ಮೀರದ ಅಮಾಯಕ ನಾಗರಿಕರ ಹತ್ಯೆಗಳ ಯೋಜನೆ, ನಿಷೇಧಿತ ಭಯೋತ್ಪಾದಕ ಸಂಘಟನೆಗಳನ್ನು ಬೆಂಬಲಿಸಲು ಶಸ್ತ್ರಾಸ್ತ್ರಗಳನ್ನು ಸಹ-ಸಂಯೋಜಕ ಮತ್ತು ಸಾಗಣೆಗೆ ಸಂಬಂಧಿಸಿದಂತೆ ಟಿಆರ್‌’ಎಫ್ ಸದಸ್ಯರು ಮತ್ತು ಸಹಚರರ ವಿರುದ್ಧ ಹೆಚ್ಚಿನ ಸಂಖ್ಯೆಯ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಅಧಿಸೂಚನೆಯಲ್ಲಿ ಉಲ್ಲೇಖಿಸಲಾಗಿದೆ.

ಹಿಂದಿನ ಲೇಖನಅಖಿಲ ಭಾರತ ವಕೀಲರ ಪರೀಕ್ಷೆ ಫೆಬ್ರವರಿ 5 ರಂದು ನಡೆಯಲಿದೆ, ಏಪ್ರಿಲ್ ವೇಳೆಗೆ ಫಲಿತಾಂಶ: ದೆಹಲಿ ಹೈಕೋರ್ಟ್’ಗೆ ತಿಳಿಸಿದ BCI
ಮುಂದಿನ ಲೇಖನಚಾಮುಂಡಿ ಬೆಟ್ಟಕ್ಕೆ ತೆರಳುತ್ತಿದ್ದ ಬಸ್’ನಲ್ಲಿ ಕಾಣಿಸಿಕೊಂಡ ಬೆಂಕಿ: ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ