ಮನೆ ರಾಜ್ಯ ಕಲುಷಿತ ನೀರಿನ ದುರಂತ ಮರುಕಳಿಸಿದರೆ ಸಿಇಓ ಅಮಾನತು: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಕಲುಷಿತ ನೀರಿನ ದುರಂತ ಮರುಕಳಿಸಿದರೆ ಸಿಇಓ ಅಮಾನತು: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

0

ಬೆಂಗಳೂರು: ಕೊಪ್ಪಳ ಜಿಲ್ಲೆಯಲ್ಲಿ ಕಲುಷಿತ ನೀರಿನ ಅನಾಹುತ ಮರು ಕಳಿಸಿದರೆ ನೇರವಾಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳನ್ನು ಹೊಣೆ ಮಾಡಿ ಅಮಾನತುಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

Join Our Whatsapp Group

ಕುಡಿಯುವ ನೀರಿನ ಸಮಸ್ಯೆ ಹಿನ್ನೆಲೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ವೀಡಿಯೊ ಕಾನ್ಫರೆನ್ಸ್ ನಡೆಸಿದ ವೇಳೆ ಈ ಎಚ್ಚರಿಕೆ ನೀಡಿದರು.

ಮೊದಲ ಅನಾಹುತ ಸಂಭವಿಸಿದಾಗಲೇ ಏಕೆ ಎಚ್ಚೆತ್ತುಕೊಳ್ಳಲಿಲ್ಲ? ಮತ್ತೆ ಘಟನೆ ಮರುಕಳಿಸಿದೆ. ನೀವು ಏನ್ ಮಾಡ್ತಾ ಇದೀರಿ? ಕಚೇರಿಯಲ್ಲಿ ಕುಳಿತು ಕೆಲಸ ಮಾಡಬಾರದು. ಸ್ಥಳಕ್ಕೆ ಭೇಟಿ ನೀಡಿ ಸಮಗ್ರವಾಗಿ ಅಧ್ಯಯನ ನಡೆಸಿ ಎಂದ ಅವರು, ಮತ್ತೆ ಕಲುಷಿತ ನೀರಿನ ಅನಾಹುತ ಆಗಬಾರದು. ಮತ್ತೆ ಮರುಕಳಿಸಿದರೆ ನೀವೇ ಹೊಣೆ ಆಗುತ್ತೀರಿ. ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಕೊಪ್ಪಳ ಜಿಲ್ಲೆ ಸೇರಿ ಎಲ್ಲೆಲ್ಲಿ ಕಲುಷಿತ ನೀರು ಕುಡಿದು ಜನರ ಆರೋಗ್ಯ ಮತ್ತು ಜೀವಕ್ಕೆ ಸಮಸ್ಯೆ ಆಗಿದೆಯೋ ಆ ಬಗ್ಗೆ ತನಿಖೆ ನಡೆಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿದರು.

ಈಗಾಗಲೇ ಸ್ಥಳೀಯವಾಗಿ ತನಿಖೆ ನಡೆಯುತ್ತಿದೆ. ಬೆಂಗಳೂರು ಕೇಂದ್ರದಿಂದಲೂ ತಂಡವನ್ನು ಕಳುಹಿಸಿತನಿಖೆ ನಡೆಸಲಾಗುವುದು. ಎರಡೂ ವರದಿಗಳು ಬಂದ ಬಳಿಕ ತಪ್ಪಿತಸ್ಥರನ್ನು ಹೊಣೆ ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಸಚಿವರಾದ ಕೃಷ್ಣಬೈರೇಗೌಡ, ಪ್ರಿಯಾಂಕ್ ಖರ್ಗೆ ಉಪಸ್ಥಿತರಿದ್ದರು.

ಹಿಂದಿನ ಲೇಖನನಿರ್ಲಕ್ಷ್ಯದಿಂದ ವಾಹನ ಚಲಾಯಿಸಿದ್ದರೂ ಎಂವಿ ಕಾಯಿದೆ ಸೆಕ್ಷನ್ 163 ಎ ಪ್ರಕಾರ ಪರಿಹಾರ ನೀಡಬೇಕು: ಮಂಗಳೂರು ನ್ಯಾಯಮಂಡಳಿ
ಮುಂದಿನ ಲೇಖನಯುಪಿಎಸ್ ಸಿ ಸಿವಿಲ್ ಸರ್ವೀಸಸ್ ಪ್ರಿಲಿಮ್ಸ್ ಪರೀಕ್ಷೆಯ ಫಲಿತಾಂಶ ಪ್ರಕಟ