ಮನೆ ಶಿಕ್ಷಣ ಜು. 30 ರಂದು ಸಿಇಟಿ ಫಲಿತಾಂಶ ಪ್ರಕಟ: ಸಚಿವ ಅಶ್ವತ್ಥ ನಾರಾಯಣ

ಜು. 30 ರಂದು ಸಿಇಟಿ ಫಲಿತಾಂಶ ಪ್ರಕಟ: ಸಚಿವ ಅಶ್ವತ್ಥ ನಾರಾಯಣ

0

ಬೆಂಗಳೂರು(Bengaluru): ಸಿಇಟಿ ಪರೀಕ್ಷೆಯ ಫಲಿತಾಂಶವು ಜುಲೈ 30 ರಂದು ಪ್ರಕಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

ಜೂನ್ ಮಧ್ಯಭಾಗದಲ್ಲಿ ವಿವಿಧ ವೃತ್ತಿಪರ ಕೋರ್ಸುಗಳಿಗೆ ಪ್ರವೇಶ ಪಡೆದುಕೊಳ್ಳಲು ನಡೆದಿದ್ದ ಸಿಇಟಿ ಪರೀಕ್ಷೆಯನ್ನು ಈ ಬಾರಿ ಬಿಗಿ ಭದ್ರತೆ ನಡುವೆ ಕಟ್ಟುನಿಟ್ಟಾಗಿ ನಡೆಸಲಾಗಿತ್ತು ಎಂದರು.

ಸಿಇಟಿ ಪರೀಕ್ಷೆ ನಡೆಸುವಾಗ ಸಿಬಿಎಸ್ ಸಿ ಮತ್ತು ಐಸಿಎಸ್ ಈ ಪಠ್ಯಕ್ರಮದಲ್ಲಿ 12ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿಗಳಿಗೂ ಅವಕಾಶ ಕೊಡಲಾಗಿತ್ತು. ಈಗ ಅವರ ಫಲಿತಾಂಶ ಬಂದಿದ್ದು, ಸಿಇಟಿ ಬರೆದಿದ್ದ ಈ ವಿದ್ಯಾರ್ಥಿಗಳು, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ ಸೈಟ್ ನಲ್ಲಿ ತಮ್ಮ ಅಂಕಗಳನ್ನು ನಾಳೆ (ಜು.26) ಸಂಜೆಯೊಳಗೆ ಅಪ್ಲೋಡ್ ಮಾಡಬೇಕು ಎಂದು ಅವರು ಹೇಳಿದ್ದಾರೆ.

ಹಿಂದಿನ ಲೇಖನಶಾಹು ಮಹಾರಾಜ್, ಮಹಾತ್ಮ ಜ್ಯೋತಿಬಾ ಫುಲೆ ಕೃತಿಗಳನ್ನು ಜನರಿಗೆ ತಲುಪಿಸಲು ಅಗತ್ಯ ಕ್ರಮ ಕೈಗೊಳ್ಳಿ: ಬಾಂಬೆ ಹೈಕೋರ್ಟ್
ಮುಂದಿನ ಲೇಖನಮೈಸೂರು ವಿಶ್ವವಿದ್ಯಾಲಯ: ಜುಲೈ 27 ರಂದು ಸಂಸ್ಥಾಪನಾ ದಿನಾಚರಣೆ