ಮನೆ ಉದ್ಯೋಗ ಮೈಸೂರು: ಸಿಎಫ್’ಟಿಆರ್’ಐನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಮೈಸೂರು: ಸಿಎಫ್’ಟಿಆರ್’ಐನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

0

ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯು ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ. ಒಟ್ಟು ಒಂದು ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಜನವರಿ 21 ಕೊನೆಯ ದಿನವಾಗಿದ್ದು, ಆಸಕ್ತರು ಈ ಕೂಡಲೇ ಅಪ್ಲಿಕೇಶನ್ ಹಾಕಿ.

ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್’ಸೈಟ್ cftri.res.inಗೆ ಭೇಟಿ ಕೊಡಿ. ಅಭ್ಯರ್ಥಿಗಳು ಆನ್’ಲೈನ್ ಮೂಲಕ ಅರ್ಜಿ ಹಾಕಬೇಕು.

ಶೈಕ್ಷಣಿಕ ಅರ್ಹತೆ:

ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಹಾಕುವ ಅಭ್ಯರ್ಥಿ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಲ್ಲಿ ಕಡ್ಡಾಯವಾಗಿ ಎಂಎಸ್ಸಿ ಪೂರ್ಣಗೊಳಿಸಿರಬೇಕು.

ವಯೋಮಿತಿ:

ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಹಾಕುವ ಅಭ್ಯರ್ಥಿಯ ವಯಸ್ಸು ಜನವರಿ 21, 2023 ಕ್ಕೆ ಗರಿಷ್ಠ 50 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಅರ್ಜಿ ಶುಲ್ಕ:

ಯಾವುದೇ ಅರ್ಜಿ ಶುಲ್ಕ ಇಲ್ಲ.

ವೇತನ:

ಮಾಸಿಕ 15,000 ರೂ.

ಆಯ್ಕೆ ಪ್ರಕ್ರಿಯೆ:

ಲಿಖಿತ ಪರೀಕ್ಷೆ

ಸಂದರ್ಶನ

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 19/01/2023

ಅರ್ಜಿ ಸಲ್ಲಿಸಲು ಕೊನೆಯ ದಿನ: ಜನವರಿ 21, 2023

ಹಿಂದಿನ ಲೇಖನಭೂ ಸ್ವಾಧೀನದ ಪರಿಹಾರ ನೀಡಲು ಲಂಚ ಸ್ವೀಕರಿಸುತ್ತಿದ್ದ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ
ಮುಂದಿನ ಲೇಖನಬೇಡಿಕೆ ಈಡೇರಿಸುವುದಾಗಿ ಸರ್ಕಾರ ಭರವಸೆ: ಕುಸ್ತಿಪಟುಗಳ ಹೋರಾಟ ಅಂತ್ಯ