ಮನೆ ಉದ್ಯೋಗ ಸಿಎಫ್ ಟಿಆರ್ ಐ ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಸಿಎಫ್ ಟಿಆರ್ ಐ ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

0

ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯು ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ. ಒಟ್ಟು ಒಂದು ಸೀನಿಯರ್ ರಿಸರ್ಚ್ ಫೆಲೋ ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

Join Our Whatsapp Group

ಅರ್ಜಿ ಸಲ್ಲಿಸಲು ಮೇ 4, 2023 ಕೊನೆಯ ದಿನವಾಗಿದ್ದು, ಆಸಕ್ತರು ಈ ಕೂಡಲೇ ಅಪ್ಲಿಕೇಶನ್ ಹಾಕಿ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಹಾಕಬೇಕು. ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್ ಸೈಟ್ cftri.res.in ಭೇಟಿ ಕೊಡಿ. ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ವಿದ್ಯಾರ್ಹತೆ:

ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂ.ಟೆಕ್, ಎಂ.ಎಸ್ಸಿ ಪೂರ್ಣಗೊಳಿಸಿರಬೇಕು.

ವಯೋಮಿತಿ:

ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಮೇ 4, 2023ಕ್ಕೆ ಗರಿಷ್ಠ 32 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:

ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 35,000 ಸಂಬಳ ಕೊಡಲಾಗುತ್ತದೆ.

ಉದ್ಯೋಗದ ಸ್ಥಳ:

ಮೈಸೂರು

ಆಯ್ಕೆ ಪ್ರಕ್ರಿಯೆ:

ಲಿಖಿತ ಪರೀಕ್ಷೆ

ಸಂದರ್ಶನ

ಅರ್ಜಿ ಶುಲ್ಕ:

ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 24/04/2023

ಅರ್ಜಿ ಸಲ್ಲಿಸಲು ಕೊನೆಯ ದಿನ: ಮೇ 4, 2023