ಬೆಂಗಳೂರು(Bengaluru): ಬೆಂಗಳೂರು ನಗರದ ನೂತನ ಪೊಲೀಸ್ ಆಯುಕ್ತರಾಗಿ ಸಿ.ಹೆಚ್.ಪ್ರತಾಪ್ ರೆಡ್ಡಿ ಅವರಿಂದು ಅಧಿಕಾರ ವಹಿಸಿಕೊಂಡರು.
ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನಿರ್ಗಮಿತ ಕಮೀಷನರ್ ಕಮಲ್ ಪಂತ್ ಅವರು ಪ್ರತಾಪ್ ರೆಡ್ಡಿ ಅವರಿಗೆ ಬ್ಯಾಟನ್ ಹಸ್ತಾಂತರಿಸಿದರು.
ರಾಜ್ಯ ಸರ್ಕಾರ ಸೋಮವಾರ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸೇರಿದಂತೆ ಹಲವು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದು, ನೂತನ ನಗರ ಪೊಲೀಸ್ ಆಯುಕ್ತರಾಗಿ ಆಗಿ ಪ್ರತಾಪ್ ರೆಡ್ಡಿ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿತ್ತು.
ಕಮಲ್ ಪಂತ್ ಅವರನ್ನು ಪೊಲೀಸ್ ತರಬೇತಿ ವಿಭಾಗದ ಡಿಜಿಪಿ ಆಗಿ ವರ್ಗಾವಣೆ ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಎಡಿಜಿಪಿಯಾಗಿ ಕರ್ತವ್ಯ ನಿರ್ವಹಿಸಿರುವ ಸಿ. ಹೆಚ್. ಪ್ರತಾಪ್ ರೆಡ್ಡಿ ಅವರು ಪೊಲೀಸ್ ಇಲಾಖೆಯಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ.