ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರು ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದ ಎಲ್ಲಾ ಶಾಖೆಗಳಿಗೂ ಧಿಡೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ನೌಕರರ ಹಾಜರಾತಿ, ಸಮವಸ್ತç, ಕಡತಗಳ ವಿಲೇವಾರಿ ಸೇರಿದಂತೆ ವಿವಿಧ ವಿಷಯಗಳ ಕುರಿತು ಪರಿಶೀಲಿಸಿದ ಸಭಾಪತಿ ಬಸವರಾಜ ಹೊರಟ್ಟಿ ಅವರು ಎಲ್ಲಾ ನೌಕರರು ಕಡ್ಡಾಯವಾಗಿ ಸಮಯಕ್ಕೆ ಸರಿಯಾಗಿ ಹಾಜರಾಗಿ, ಸಂವಿಧಾನಾತ್ಮಕ ಸಂಸ್ಥೆಯಾಗಿರುವ ವಿಧಾನ ಪರಿಷತ್ತಿನ ಕಾರ್ಯಚಟುವಟಿಕೆಗಳನ್ನು ವ್ಯವಸ್ಥಿತವಾಗಿ ನಿರ್ವಹಿಸುವಂತೆ ಸೂಚನೆ ನೀಡಿದರು.
ಈ ವೇಳೆ ವಿಧಾನ ಪರಿಷತ್ ಸಚಿವಾಲಯದ ಎಲ್ಲಾ ಹಿರಿಯ ಅಧಿಕಾರಿಗಳು ಹಾಗೂ ನೌಕರರು ಹಾಜರಿದ್ದರು.