Saval TV on YouTube
ಚಾಮರಾಜನಗರ(Chamarajanagar): 12 ವರ್ಷದ ಬಾಲಕಿಯೊಬ್ಬಳು ಗರ್ಭಿಣಿಯಾಗಿರುವ ಕಳವಳಕಾರಿ ಘಟನೆ ಗುಂಡ್ಲುಪೇಟೆ ತಾಲೂಕಿನ ಗ್ರಾಮದಲ್ಲಿ ನಡೆದಿದೆ.
12 ವರ್ಷದ ಬಾಲಕಿ 3 ತಿಂಗಳ ಗರ್ಭಿಣಿಯಾಗಿದ್ದು, ಸದ್ಯ ಬಾಲಮಂದಿರದಲ್ಲಿ ಸಂತ್ರಸ್ತೆಯನ್ನು ಇರಿಸಲಾಗಿದೆ.
ಮೊದಮೊದಲು ಚಿಕ್ಕಪ್ಪನ ಸ್ನೇಹಿತ ಇದಕ್ಕೆ ಕಾರಣ ಎಂದು ಹೇಳಿದ್ದ ಬಾಲಕಿ ಅದಾದ ಬಳಿಕ ಅಳಲು ಪ್ರಾರಂಭಿಸಿ ಆತಂಕ, ಭಯ, ಒತ್ತಡದಿಂದಾಗಿ ಹೆಚ್ಚೇನೂ ಹೇಳುತ್ತಿಲ್ಲ ಎಂದು ತಿಳಿದು ಬಂದಿದೆ.
ಸಂತ್ರಸ್ತ ಬಾಲಕಿಯನ್ನು ಸಮಾಲೋಚನೆಗೆ ಒಳಪಡಿಸಲಾಗುತ್ತಿದೆ. ಗ್ರಾಮದ ಆಶಾ ಕಾರ್ಯಕರ್ತೆಯಿಂದ ಬಾಲಕಿ ಗರ್ಭಿಣಿಯಾಗಿರುವ ವಿಚಾರ ಬೆಳಕಿಗೆ ಬಂದಿದೆ.
ಈ ಸಂಬಂಧ ಕುಟುಂಬಸ್ಥರನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದು ಚಾಮರಾಜನಗರ ಮಹಿಳಾ ಠಾಣೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿಗಳು ದೂರು ನೀಡಿದ್ದಾರೆ.