ಮನೆ ರಾಜ್ಯ ಚಾಮರಾಜನಗರ: ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಚಿಕನ್ ಊಟ ತಿಂದು 30 ಮಕ್ಕಳು ಅಸ್ವಸ್ಥ, ಆಸ್ಪತ್ರೆಗೆ...

ಚಾಮರಾಜನಗರ: ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಚಿಕನ್ ಊಟ ತಿಂದು 30 ಮಕ್ಕಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು

0

ಚಾಮರಾಜನಗರ: ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಭಾನುವಾರ ರಾತ್ರಿ ಚಿಕನ್ ಊಟ ಸೇವಿಸಿದ ಮಕ್ಕಳು ಅಸ್ವಸ್ಥರಾಗಿದ್ದಾರೆ.

Join Our Whatsapp Group

ಚಿಕನ್ ಊಟ ಸೇವಿಸಿದ ಬಳಿಕ ಮಕ್ಕಳಿಗೆ ವಾಂತಿ, ಬೇಧಿಯಾಗಿ ಅಸ್ವಸ್ಥಗೊಂಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಯಡವನಹಳ್ಳಿ ಗ್ರಾಮದ ಮೊರಾರ್ಜಿ ವಸತಿ ಶಾಲೆಯಲ್ಲಿ ನಡೆದಿದೆ.

ಒಟ್ಟು 30 ವಿದ್ಯಾರ್ಥಿಗಳು ತೀವ್ರ ಅಸ್ವಸ್ಥರಾಗಿದ್ದು, 15 ಮಂದಿಗೆ ಬೇಗೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಶಿಕ್ಷಣ ಇಲಾಖೆ ಅಧಿಕಾರಿಗಳು, ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ.

ಕೆಲ ದಿನಗಳ ಹಿಂದೆ ಬೀದರ್‌ ನ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿದ್ದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಾಂತಿ, ಭೇದಿಯಿಂದ ಅನಾರೋಗ್ಯಪೀಡಿತರಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಹುಮನಾಬಾದ್ ತಾಲೂಕಿನ ನಿಂಬೂರ್ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಘಟನೆ ನಡೆದಿತ್ತು. ಮೊದಲಿಗೆ ಕೆಲವೇ ವಿದ್ಯಾರ್ಥಿಗಳಲ್ಲಿ ಹೊಟ್ಟೆ ನೋವು ವಾಂತಿ, ಭೇದಿ ಕಂಡು ಬಂದಿದೆ. ಬಳಿಕ ಮನೆಗೆ ತೆರಳಿದ ಇನ್ನುಳಿದ ವಿದ್ಯಾರ್ಥಿಗಳಲ್ಲೂ ವಾಂತಿ, ಭೇದಿ ಕಾಣಿಸಿಕೊಂಡು ಅಸ್ವಸ್ಥರಾಗಿದ್ದರು. ಕೂಡಲೇ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.