ಚಾಮರಾಜನಗರ(Chamarajanagar): ತಾಲ್ಲೂಕಿನ ಅಮಚವಾಡಿ-ಚೆನ್ನಪ್ಪನಪುರ ಗ್ರಾಮದ ವೀರಭದ್ರೇಶ್ವರ ಸ್ವಾಮಿ ದೇವಾಲಯದಲ್ಲಿ ಮಂಗಳವಾರ ನಡೆದ ರಥೋತ್ಸವ ಸಂದರ್ಭದಲ್ಲಿ ರಥ ಪಲ್ಟಿಯಾಗಿದ್ದು, ಅದೃಷ್ಟವಶಾತ್ ಸಾವು- ನೋವು ಸಂಭವಿಸಿಲ್ಲ.
ಆರು ಶತಮಾನಗಳಿಂತಲೂ ಹಳೆಯದಾದ ವೀರಭದ್ರೇಶ್ವರ ಸ್ವಾಮಿ ದೇವಾಲಯದಲ್ಲಿ ಎರಡು ವರ್ಷಗಳ ಬಳಿಕ ರಥೋತ್ಸವ ಹಮ್ಮಿಕೊಳ್ಳಲಾಗಿತ್ತು. ಮಧ್ಯಾಹ್ನ 12 ಗಂಟೆಗೆ ರಥೋತ್ಸವ ಆರಂಭವಾಯಿತು. ದೇವಾಲಯದ ಆವರಣದಲ್ಲಿ ಒಂದು ಸುತ್ತು ರಥ ಎಳೆಯಬೇಕಿತ್ತು. ತೇರು ಅರ್ಧದವರೆಗೆ ತಲುಪಿದಾಗ ಅದರ ಚಕ್ರ ಕಲ್ಲಿನ ಮೇಲೆ ಹತ್ತಿತು. ಈ ಸಂದರ್ಭದಲ್ಲಿ ರಥ ಮಗುಚಿದೆ.
ಸುತ್ತಮುತ್ತಲಿನ ಗ್ರಾಮಗಳ ನೂರಾರು ಭಕ್ತರು ರಥೋತ್ಸವದಲ್ಲಿ ಸೇರಿದ್ದರು. ಆದರೆ ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ.