ಮನೆ ರಾಜ್ಯ ಚಾಮರಾಜನಗರ: ಮನೆಗೋಡೆ ಕುಸಿದು ವ್ಯಕ್ತಿ ಸಾವು

ಚಾಮರಾಜನಗರ: ಮನೆಗೋಡೆ ಕುಸಿದು ವ್ಯಕ್ತಿ ಸಾವು

0

ಚಾಮರಾಜನಗರ(Chamarajanagara): ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಮನೆಗೋಡೆ ಕುಸಿದು ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ತಾಲ್ಲೂಕಿನ ದಡದಹಳ್ಳಿ ಗ್ರಾಮದಲ್ಲಿ ನಡೆದಿದೆ.

ಪುಟ್ಟಮಾದಯ್ಯ ಅವರ ಪುತ್ರ ಮೂರ್ತಿ (೨೯) ಎಂಬವರೇ ಮೃತ ದುರ್ದೈವಿ.

ರಾತ್ರಿ ಪೂರ್ತಿ ಸುರಿದ ಮಳೆಗೆ ಮಣ್ಣಿನ ಗೋಡೆ ಕುಸಿದು ನಿದಿರೆ ಮಾಡುತ್ತಿದ್ದ ಮೂರ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಸದ್ಯಕ್ಕೆ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

ಹಿಂದಿನ ಲೇಖನಲೈಂಗಿಕ ಕಿರುಕುಳ ಪ್ರಕರಣ: ಮುರುಘಾ ಶರಣರಿಗೆ ನ್ಯಾಯಾಂಗ ಬಂಧನ
ಮುಂದಿನ ಲೇಖನಚಾಮರಾಜನಗರ: ತುಂಬಿ ಹರಿಯುತ್ತಿರುವ ಸುವರ್ಣಾವತಿ ನದಿ