ಮನೆ ರಾಜ್ಯ ಮದುವೆಯೇ ಆಗಿಲ್ಲ ಎಂದು ನಿರ್ದೇಶಕಿ ಹಣೆಗೆ ಕುಂಕುಮ ಇಟ್ಟ ಚಾಮರಾಜನಗರ ಸಂಸದ ಸುನೀಲ್‌ ಬೋಸ್

ಮದುವೆಯೇ ಆಗಿಲ್ಲ ಎಂದು ನಿರ್ದೇಶಕಿ ಹಣೆಗೆ ಕುಂಕುಮ ಇಟ್ಟ ಚಾಮರಾಜನಗರ ಸಂಸದ ಸುನೀಲ್‌ ಬೋಸ್

0

ಮೈಸೂರು: ಚಾಮರಾಜನಗರ ಸಂಸದರು ದೇವಾಲಯದ ಗರ್ಭಗುಡಿಯಲ್ಲಿ ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕಿ ಹಣೆಗೆ ಕುಂಕುಮ ಇಟ್ಟ ಘಟನೆ ನಡೆದಿದೆ. ತನಗೆ ಮದುವೆಯೇ ಆಗಿಲ್ಲ ಎಂದು ಸಂಸದರು ಹೇಳಿಕೊಂಡಿದ್ದರು. ಹೀಗಾಗಿ ಇದೀಗ ಸುದ್ದಿಯಾಗಿದೆ. ಇವರಿಬ್ಬರ ಫೋಟೋ ಕೂಡ ವೈರಲ್‌ ಆಗಿದೆ.

Join Our Whatsapp Group

ಮೈಸೂರಿನ ಚಾಮುಂಡೇಶ್ವರಿ ತಾಯಿ ಗರ್ಭಗುಡಿಯಲ್ಲೇ ಈ ಘಟನೆ ನಡೆದಿದೆ. ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕಿ ಸವಿತಾ ಅವರ ಹಣೆಗೆ ಚಾಮರಾಜನಗರ ಸಂಸದ ಸುನೀಲ್‌ ಬೋಸ್ ಕುಂಕುಮ ಇಟ್ಟಿದ್ದಾರೆ. ಆಷಾಢ ಮಾಸದ ಮೂರನೇ ಶುಕ್ರವಾರದಂದು ಚಾಮುಂಡಿ ಬೆಟ್ಟಕ್ಕೆ ಇವರಿಬ್ಬರೂ ಜತೆಯಾಗಿ ಬಂದಿದ್ದರು.

ಈ ವೇಳೆ ಗರ್ಭಗುಡಿಯಲ್ಲಿ ಇವರು ವಿಶೇಷ ಪೂಜೆ ಮಾಡಿಸಿದ್ದಾರೆ. ಪೂಜೆ ನೆರವೇರಿಸುವ ವೇಳೆ ಬೆಂಬಲಿಗರ ಸಮ್ಮುಖದಲ್ಲೇ ಸವಿತಾ ಹಣೆಗೆ ಸುನೀಲ್‌ ಬೋಸ್ ಕುಂಕುಮ ಇಟ್ಟರು. ಸಾರ್ವಜನಿಕ ವಲಯದಲ್ಲಿ ಸುನೀಲ್‌ ಬೋಸ್ ನಡೆ ಇದೀಗ ಚರ್ಚೆಗೆ ಕಾರಣವಾಗಿದೆ.

ಯಾಕೆಂದರೆ ಲೋಕಸಭಾ ಚುನಾವಣೆ ಸಂದರ್ಭದಲ್ಲಿ, ತಮಗೆ ಮದುವೆ ಆಗಿಲ್ಲ ಎಂದು ಸುನೀಲ್‌ ಬೋಸ್ ಅಫಿಡೆವಿಟ್ ಸಲ್ಲಿಸಿದ್ದರು. ಈ ಬಗ್ಗೆ ಚುನಾವಣಾ ಅಧಿಕಾರಿಗಳಿಗೆ ದೂರನ್ನೂ ಚಾಮರಾಜನಗರ ಬಿಜೆಪಿ ಸದಸ್ಯರು ನೀಡಿದ್ದರು. ಸುನೀಲ್‌ ಬೋಸ್ ಹಾಗೂ ಸವಿತಾ ಜತೆಯಲ್ಲಿ ಇರುವ ಫೋಟೋಗಳನ್ನು ನೀಡಿ ದೂರು ಕೊಟ್ಟಿದ್ದರು. ಸುನೀಲ್‌ ಬೋಸ್‌ ಗೆ ಮದುವೆಯಾಗಿದೆ, ಆದರೆ ಅಫಿಡವಿಟ್‌ನಲ್ಲಿ ಸುಳ್ಳು ಹೇಳಿದ್ದಾರೆ ಎಂದು ದೂರಿದ್ದರು.

ʼಇದೀಗ, ಚಾಮುಂಡೇಶ್ವರಿ ಗರ್ಭಗುಡಿಯಲ್ಲಿ ನಡೆದದ್ದು ಸುಳ್ಳು ಅಲ್ಲ ತಾನೆ?ʼ ಎಂದು ಬಿಜೆಪಿ ಸದಸ್ಯರು ಪ್ರಶ್ನಿಸಿದ್ದಾರೆ. ʼಮದುವೆ ಆಗಿದ್ದರೆ, ಆಗಿದೆ ಎಂದು ಹೇಳಲಿ. ಇದರಲ್ಲಿ ಅಡಗಿಸಿ ಇಡುವ ಮುಜುಗರದ ಸಂಗತಿ ಏನಿದೆ?ʼ ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ.

ವಾಟ್ ಇಸ್ ದ ಪ್ರಾಬ್ಲಂ? ಎಂದ ಸಚಿವ ಮಹಾದೇವಪ್ಪ

ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್‌ಸಿ ಮಹದೇವಪ್ಪ, ನನ್ನ ಪುತ್ರ ಸಂಸದ ಸುನೀಲ್ ಭೋಸ್ ಮಹಿಳಾ ಕೆಎಎಸ್ ಅಧಿಕಾರಿಯ ಹಣೆಗೆ ಕುಂಕುಮ ಇಟ್ಟಿದ್ದಾರೆ. ಇದರಲ್ಲಿ ಸಮಸ್ಯೆ/ ತಪ್ಪು ಏನಿದೆ? (ವಾಟ್‌ ಇಸ್‌ ದ ಪ್ರಾಬ್ಲಂ) ಎಂದ ಕೇಳಿದ್ದಾರೆ.

ಸಂವಿಧಾನದಲ್ಲಿ ಹಾಗೂ ಹಿಂದೂ ಸಂಪ್ರದಾಯದಲ್ಲಿ ಎಲ್ಲರೂ ಸಮಾನರಾಗಿದ್ದಾರೆ. ಯಾವುದೇ ಲಿಂಗಭೇದ, ತಾರತಮ್ಯಕ್ಕೆ ಅವಕಾಶವಿಲ್ಲ. ಯಾರು ಯಾರಿಗೆ ಬೇಕಾದರೂ ಕುಂಕುಮವನ್ನು ಇಡಬಹುದು. ಹೀಗಾಗಿ, ನನ್ನ ಪುತ್ರ ಸಂಸದ ಸುನೀಲ್ ಬೋಸ್‌ ಮಹಿಳಾ ಕೆಎಎಸ್ ಅಧಿಕಾರಿಯ ಹಣೆಗೆ ಕುಂಕುಮ ಇಟ್ಟಿದ್ದಾರೆ. ಇದರಲ್ಲಿ ತಪ್ಪೇನು ಇಲ್ಲ ಎಂದು ಸಚಿವ ಮಹಾದೇವಪ್ಪ ಹೇಳಿದ್ದಾರೆ.