ಬೆಂಗಳೂರು: ಚಾಮರಾಜನಗರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 207 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ.
ಹುದ್ದೆಗಳ ವಿವರ: ಒಟ್ಟು 207 ಹುದ್ದೆಗಳು
ಅಂಗನವಾಡಿ ಕಾರ್ಯಕರ್ತೆಯರು – 80
ಅಂಗನಾಡಿ ಸಹಾಯಕಿಯರು – 127
ಯಾವ ತಾಲೂಕಿನಲ್ಲಿ ಎಷ್ಟು ಹುದ್ದೆಗಳು
ತಾಲೂಕು ಅಂ. ಕಾರ್ಯಕರ್ತೆಯರು ಅಂ. ಸಹಾಯಕಿಯರು
ಚಾಮರಾಜನಗರ 11 19
ಸಂತೇಮರಹಳ್ಳಿ 9 15
ಗುಂಡ್ಲುಪೇಟೆ 18 38
ಕೊಳ್ಳೇಗಾಲ 14 24
ಹನೂರು 24 24
ಯಳಂದೂರು 4 7
ವಿದ್ಯಾರ್ಹತೆ: ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಪಿಯುಸಿ ಹಾಗು ಸಹಾಯಕರ ಹುದ್ದೆಗಳಿಗೆ ಎಸ್ಎಸ್ಎಲ್ಸಿ ಮುಗಿಸಿರಬೇಕು.
ವಯೋಮಿತಿ: 19ರಿಂದ 35 ವರ್ಷ. ವಿಶೇಷಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇದೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಲಭ್ಯವಿರುವ ಅಧಿಸೂಚನೆಯನ್ನು ಪರಿಶೀಲಿಸಿ, ಆನ್‌ಲೈನ್ ಮೂಲಕ ಅರ್ಜಿ ಭರ್ತಿ ಮಾಡುವಂತೆ ತಿಳಿಸಲಾಗಿದೆ. ಯಾವುದೇ ಅರ್ಜಿ ಶುಲ್ಕವಿಲ್ಲ. ಮೆರಿಟ್ ಪಟ್ಟಿ ಮತ್ತು ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ. ಅರ್ಜಿ ಸಲ್ಲಿಸುವವರು ಅಂಗನವಾಡಿ ಕೇಂದ್ರದ ಆಯಾ ತಾಲೂಕು, ಗ್ರಾಮಾಂತರ ಪ್ರದೇಶಗಳಲ್ಲಿ ವಾಸಿಸುವ ಸ್ಥಳೀಯರೇ ಆಗಿರಬೇಕು. ಈ ಕುರಿತು ಹೆಚ್ಚಿನ ಮಾಹಿತಿಗೆ ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಸಂಪರ್ಕಿಸಬಹುದು.
ಅರ್ಜಿ ಸಲ್ಲಿಕೆ ಪ್ರಕ್ರಿಯೆಗೆ ಕಡೇಯ ದಿನಾಂಕ ನ. 27 ಆಗಿದೆ.
ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು http://karnemakaone.kar.nic.in/abcd/ ಜಾಲತಾಣಕ್ಕೆ ಭೇಟಿ ನೀಡಿ. ಇಲ್ಲಿ ಜಿಲ್ಲೆ ಮತ್ತು ಹುದ್ದೆಗಳನ್ನು ಆಯ್ಕೆ ಮಾಡಿ, ಅಗತ್ಯ ಪ್ರಮಾಣಪತ್ರ ಸೇರಿದಂತೆ ಮತ್ತಿತರ ವಿವರ ಸಲ್ಲಿಸಿ, ಅರ್ಜಿ ಹಾಕಿ.