ಮನೆ ಅಪರಾಧ ಚಾಮರಾಜನಗರ: ಎಸ್’ಎಸ್’ಎಲ್’ಸಿ ವಿದ್ಯಾರ್ಥಿನಿ ಮೇಲೆ ನೆರೆಮನೆಯವನಿಂದಲೇ ಅತ್ಯಾಚಾರ – ಆರೋಪಿ ಬಂಧನ

ಚಾಮರಾಜನಗರ: ಎಸ್’ಎಸ್’ಎಲ್’ಸಿ ವಿದ್ಯಾರ್ಥಿನಿ ಮೇಲೆ ನೆರೆಮನೆಯವನಿಂದಲೇ ಅತ್ಯಾಚಾರ – ಆರೋಪಿ ಬಂಧನ

0

ಚಾಮರಾಜನಗರ(Chamarajanagar): ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿಯ ಮೇಲೆ ನೆರೆಮನೆಯ ವ್ಯಕ್ತಿಯೇ ಅತ್ಯಾಚಾರವೆಸಗಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ.

ಪೊಲೀಸರು ಆರೋಪಿ ಮರಿಸ್ವಾಮಿ(56) ಎಂಬುವನನ್ನು ಬಂಧಿಸಿದ್ದಾರೆ.

ನೆರೆಮನೆಯಲ್ಲಿದ್ದ ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿಯನ್ನು ಈತ ಪುಸಲಾಯಿಸಿ ಅತ್ಯಾಚಾರ ಎಸಗಿದ್ದು, ಬಾಲಕಿಯು ಮನೆಯವರಿಗೆ ಗುರುವಾರ ಮಾಹಿತಿ ತಿಳಿಸಿದ್ದಾಳೆ. ಆಕೆಯನ್ನು ಪ್ರಾಥಮಿಕ‌ ಆರೋಗ್ಯ ಕೇಂದ್ರದಲ್ಲಿ ಪರೀಕ್ಷೆ ಮಾಡಿಸಿದಾಗ ವಿದ್ಯಾರ್ಥಿನಿ 5 ತಿಂಗಳ ಗರ್ಭಿಣಿಯಾಗಿರುವುದು ಖಚಿತವಾಗಿದೆ.

ಬಳಿಕ, ವಿಚಾರ ತಿಳಿದ ಮಕ್ಕಳ ಕಣ್ಗಾವಲು ಘಟಕದ ಅಧಿಕಾರಿಗಳು ಮತ್ತೊಮ್ಮೆ ಪರೀಕ್ಷೆ ನಡೆಸಿ ಖಚಿತ ಪಡಿಸಿಕೊಂಡ ನಂತರ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಸದ್ಯ ಬಾಲಕಿಯನ್ನು ಸಾಂತ್ವನ ಕೇಂದ್ರಕ್ಕೆ ಕಳುಹಿಸಲಾಗಿದೆ.

ಹಿಂದಿನ ಲೇಖನನಟ ಪುನೀತ್ ರಾಜ್ ಕುಮಾರ್ ಪುಣ್ಯ ಸ್ಮರಣೆ: ಸಿಎಂ ಸೇರಿದಂತೆ ಅಭಿಮಾನಿಗಳಿಂದ ಗೌರವ ನಮನ
ಮುಂದಿನ ಲೇಖನಮಾಧ್ಯಮಗಳಿಗೆ ದೀಪಾವಳಿ ಸಿಹಿ ತಿನಿಸಿನ ಜೊತೆ ಸಿಎಂ ಕಚೇರಿಯಿಂದ ಲಂಚ ಹಂಚಿಕೆ ಆರೋಪ: ಲೋಕಾಯುಕ್ತಕ್ಕೆ ದೂರು ಸಲ್ಲಿಕೆ