ಚಾಮರಾಜನಗರ(Chamarajangara): ಜಿಲ್ಲೆಯಾದ್ಯಂತ ರಾತ್ರಿಯಿಡೀ ಸುರಿದ ಧಾರಾಕಾರ ಮಳೆಗೆ ಜಿಲ್ಲೆಯ ಅವಳಿ ಜಲಾಶಯಗಳ ಒಳಹರಿವು ಹೆಚ್ಚಾಗಿದ್ದು, ಸುವರ್ಣಾವತಿ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಬಿಡಲಾಗುತ್ತಿದೆ.
ತಾಲ್ಲೂಕಿನ ಅವಳಿ ಜಲಾಶಯಗಳಾದ ಸುವರ್ಣಾವತಿ ಹಾಗೂ ಚಿಕ್ಕಹೊಳೆ ಜಲಾಶಯದಿಂದ ತಲಾ ೧೮ ಕ್ಯೂಸೆಕ್ ನೀರು ಹೊರ ಬಿಡಲಾಗುತ್ತಿದೆ. ಸುವರ್ಣಾವತಿ ನದಿ ಮೈದುಂಬಿ ಹರಿಯುತ್ತಿದ್ದು ಹಲವು ಸೇತುವೆಗಳು ಮುಳುಗಡೆಯಾಗಿದ್ದರೆ, ನದಿ ಅಂಚಿನ ಕೆಲವು ಗ್ರಾಮಗಳು ಬಹುತೇಕ ಮುಳುಗಡೆಯಾಗಿದೆ.
ಚಾಮರಾಜನಗರ, ಯಳಂದೂರು ಹಾಗೂ ಕೊಳ್ಳೇಗಾಲ ತಾಲ್ಲೂಕಿನ ಹಲವಾರು ಗ್ರಾಮಗಳು ಹಾಗೂ ಕೃಷಿ ಪ್ರದೇಶಕ್ಕೆ ಹಾನಿಯಾಗುವ ಸಾಧ್ಯತೆ ಇದೆ.
Saval TV on YouTube