ಮನೆ ರಾಜ್ಯ ಚಾಮರಾಜನಗರ: ಉಳುಮೆ ಮಾಡುವಾಗ ಟ್ರಾಕ್ಟರ್ ಪಲ್ಟಿ- ಚಾಲಕ ಸಾವು

ಚಾಮರಾಜನಗರ: ಉಳುಮೆ ಮಾಡುವಾಗ ಟ್ರಾಕ್ಟರ್ ಪಲ್ಟಿ- ಚಾಲಕ ಸಾವು

0

ಚಾಮರಾಜನಗರ(Chamarajanagara): ಉಳುಮೆ ಮಾಡುವಾಗ ಟ್ರಾಕ್ಟರ್ ಪಲ್ಟಿಯಾದ ಪರಿಣಾಮ ಚಾಲಕ ಮೃತಪಟ್ಟಿರುವ ಘಟನೆ ಕೊತ್ತಲವಾಡಿ ಗ್ರಾಮದಲ್ಲಿ ಇಂದು ನಡೆದಿದೆ.

ಕೊತ್ತಲವಾಡಿ ಗ್ರಾಮದ ಶಿವಕುಮಾರ್ (30) ಮೃತ ವ್ಯಕ್ತಿ.

ಉಳುಮೆ ಮಾಡುವಾಗ ನಿಯಂತ್ರಣ ತಪ್ಪಿ ಟ್ರಾಕ್ಟರ್ ಪಲ್ಟಿಯಾದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಶಿವಕುಮಾರ್ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಮಾರ್ಗ ಮಧ್ಯದಲ್ಲಿ ಅಸುನೀಗಿದ್ದಾರೆ ಎಂದು ತಿಳಿದುಬಂದಿದೆ.

ಮೃತರಿಗೆ ಪತ್ನಿ, 6 ತಿಂಗಳಿನ ಮಗುವಿದೆ ಎಂದು ಮೂಲಗಳು ತಿಳಿಸಿವೆ. ಚಾಮರಾಜನಗರ ಗ್ರಾಮಾಂತರ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.