ಚಾಮರಾಜನಗರ: ಚಾಮರಾಜನಗರದ ಬೇಡುಗುಳಿ ಸಮೀಪದ ರಾಮಯ್ಯನಪೋಡಿಯಲ್ಲಿ ನಿನ್ನೆ ರಾತ್ರಿ ಬಹಿರ್ದೆಸೆಗೆ ತೆರಳಿದ್ದ ವೇಳೆ ರವಿ ಎನ್ನುವವರ ಮೇಲೆ ಏಕಾಏಕಿ ಹುಲಿ ದಾಳಿ ನಡೆಸಿತ್ತು. ಗಾಯಗೊಂಡಿದ್ದ ಅವರು ಪ್ರಾಣಾಪಾಯದಿಂದ ಪಾರಾಗಿದ್ದರು. ಆದರೆ ಇದರ ಬೆನ್ನಲ್ಲೇ ಅದೇ ಸ್ಥಳದಲ್ಲಿ ಹುಲಿ ದಾಳಿಗೆ ಇಂದು ಬೆಳಗ್ಗೆ ರಂಗಮ್ಮ (55) ಮೃತಪಟ್ಟಿದ್ದಾರೆ.
ಬಿಳಿಗಿರಿರಂಗನಾಥ ಹುಲಿ ಸಂರಕ್ಷಿತ ಪ್ರದೇಶದ ಬೇಡಗುಳಿಯ ರಾಮಯ್ಯನ ಪೋಡು ಬಳಿ ಸೋಮವಾರ ರಾತ್ರಿ ಹಾಡಿಯಲ್ಲಿ ರವಿ ಎಂಬವರ ಮೇಲೆ ಹುಲಿ ದಾಳಿ ಮಾಡಿತ್ತು, ರವಿ ಅವರಿಗೆ ಚಿಕಿತ್ಸೆ ನೀಡಲಾಗಿದ್ದು, ಅವರು ಅಪಾಯದಿಂದ ಪಾರಾಗಿದ್ದಾರೆ. ಆದರೆ, ಇಂದು ಬೆಳಗ್ಗೆ ರಂಗಮ್ಮ ಎಂಬವರ ಮೇಲೆ ಹುಲಿ ದಾಳಿ ನಡೆಸಿದ್ದು, ತೀವ್ರವಾಗಿ ಗಾಯಗೊಂಡ ಅವರು ಮೃತಪಟ್ಟಿದ್ದಾರೆ.
ಘಟನೆ ಬೆನ್ನಲ್ಲೇ ಹುಲಿಯನ್ನು ಸೆರೆ ಹಿಡಿಯಲು ಕಾರ್ಯಾಚರಣೆ ಆರಂಭಿಸಿದ ಕೆಲವೇ ಗಂಟೆಗಳಲ್ಲಿ ಹುಲಿಯನ್ನು ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸೆರೆ ಹಿಡಿದಿದ್ದಾರೆ.














