ಮೈಸೂರು(Mysuru): ಮುಂದಿನ ವಿಧಾನಸಭೆ ಚುನಾವಣೆಗೆ ತಯಾರಿ ನಡೆಸುತ್ತಿರುವ ಜೆಡಿಎಸ್ ಪಕ್ಷವು ನಗರದಲ್ಲಿ ಪಂಚರತ್ನ ಕಾರ್ಯಾಗಾರ ನಡೆಸುತ್ತಿದೆ. ಈ ಪ್ರಯುಕ್ತ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ತಾಯಿ ಚಾಮುಂಡೇಶ್ವರಿ ದರ್ಶನ ಪಡೆದಿದ್ದಾರೆ.
ಶಾಸಕರು, ಸಂಭವನೀಯ ಅಭ್ಯರ್ಥಿಗಳ ಜತೆ ಮೂರು ಬಸ್ಸಿನಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಚಾಮುಂಡಿ ಬೆಟ್ಟಕ್ಕೆ ತೆರಳಿದ್ದಾರೆ. ಸುಮಾರು 150 ಮಂದಿ ನಾಯಕರು ಸೇರಿದ್ದಾರೆ.
ನಾಡದೇವತೆ ತಾಯಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದರು. ಶಾಸಕರಾದ ಅನಿತಾ ಕುಮಾರಸ್ವಾಮಿ ಹಾಗೂ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸಾಥ್ ನೀಡಿದರು.
Saval TV on YouTube