ಮೈಸೂರು(Mysuru): ಸಣ್ಣ ನೀರಾವರಿ ಇಲಾಖೆ ಹಾಗೂ ಅಂತರ್ಜಲ ನಿಗಮದ ವತಿಯಿಂದ ಚಾಮುಂಡಿ ಬೆಟ್ಟದ ದೇವಿಕೆರೆ ಹಾಗೂ ಹಿರಿಕೆರೆ ಗಳ ಸಮಗ್ರ ಅಭಿವೃದ್ಧಿಗೆ 7.5 ಕೋಟಿ ರೂ ವೆಚ್ಚದಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ರವರು ಗುದ್ದಲಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ಎಸ್.ಎ. ರಾಮದಾಸ್, ಗ್ರಾಮಪಂಚಾಯಿತಿ ಅಧ್ಯಕ್ಷ ಭರತ್.ಕೆ.ಮುಜುರಾಯಿ ತಹಶೀಲ್ದಾರ್ ಕೃಷ್ಣ,ಲೋಕೋಪಯೋಗಿ,ಸಣ್ಣನೀರಾವರಿ ಇಲಾಖೆ ಅಧಿಕಾರಿಗಳು ಹಾಗೂ ಸ್ಥಳೀಯ ಮುಖಂಡರು ಹಾಜರಿದ್ದರು.