ಮನೆ ಮನರಂಜನೆ ಮೊದಲ ಚಿತ್ರ ಬಿಡುಗಡೆಗೆ ಮುನ್ನವೇ ಮತ್ತೊಂದು ಚಿತ್ರಕ್ಕೆ ಬಣ್ಣ ಹಚ್ಚಿದ ಚಂದನ್ ಶೆಟ್ಟಿ

ಮೊದಲ ಚಿತ್ರ ಬಿಡುಗಡೆಗೆ ಮುನ್ನವೇ ಮತ್ತೊಂದು ಚಿತ್ರಕ್ಕೆ ಬಣ್ಣ ಹಚ್ಚಿದ ಚಂದನ್ ಶೆಟ್ಟಿ

0

ಎಲ್ರ ಕಾಲೆಳೆಯತ್ತೆ ಕಾಲ ಸಿನಿಮಾದಲ್ಲಿ ಹೀರೋ ಆಗಿರುವ    ಗಾಯಕ ಮತ್ತು ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ  ಸಿನಿಮಾ ತೆರೆಗೆ ಬರುವ ಮೊದಲೇ ಮತ್ತೊಂದು ಚಿತ್ರಕ್ಕೆ ಬಣ್ಣ ಹಚ್ಚಿದ್ದಾರೆ.

ಆ ಸಿನಿಮಾವು ವಿಜಯ ದಶಮಿ ಹಬ್ಬದಂದು ಸೆಟ್ಟೇರಲಿದ್ದು, ಅಕ್ಟೋಬರ್ 10ರಿಂದ ಸಿನಿಮಾ ಚಿತ್ರೀಕರಣ ಶುರುವಾಗಲಿದೆ.

ಕ್ರೈಮ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಕಿರಣ್ ಕುಮಾರ್ ನಿರ್ದೇಶಿಸಲಿದ್ದಾರೆ. ಇದು ಅವರಿಗೆ ಮೊದಲ ಚಿತ್ರ. ಚಂದನ್ ಶೆಟ್ಟಿ ಅಭಿನಯದ ಜೊತೆಗೆ ಸಂಗೀತ ಸಂಯೋಜಿಸಲಿದ್ದಾರೆ. ಪಿ ಕೆ ಹೆಚ್ ದಾಸ್ ಛಾಯಾಗ್ರಾಹಕರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಹೆಸರಿಡದ ಚಿತ್ರಕ್ಕೆ ಚಂದನ್ ಶೆಟ್ಟಿ ಹಾಗೂ ತಬಲ ನಾಣಿ ಆಯ್ಕೆಯಾಗಿದ್ದಾರೆ. ಇನ್ನು, ನಾಯಕಿ ಸೇರಿದಂತೆ ಅನೇಕ ಹಿರಿಯ ಕಲಾವಿದರನ್ನು ಈ ಚಿತ್ರಕ್ಕೆ ಆಯ್ಕೆ ಮಾಡಬೇಕಾಗಿದೆ.

ಕನ್ನಡ ಚಿತ್ರರಂಗದಲ್ಲಿ ಇತ್ತೀಚೆಗೆ ಸಿನಿಮಾಗಳ ಪ್ರೀ ರಿಲೀಸ್ ಇವೆಂಟ್ ಸೇರಿದಂತೆ ಸಾಕಷ್ಟು ಸಮಾರಂಭಗಳನ್ನು ಮಾಡುತ್ತಿರುವ ನವರಸನ್ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಈವರೆಗೂ ದಮಯಂತಿ ಸೇರಿದಂತೆ ನಾಲ್ಕು ಚಿತ್ರಗಳನ್ನು ನವರಸನ್ ನಿರ್ಮಾಣ ಮಾಡಿದ್ದಾರೆ.