ಮನೆ ಸುದ್ದಿ ಜಾಲ ಕೆನಡಾ ಸಂಸತ್ ನಲ್ಲಿ ಕನ್ನಡದ ಕಂಪು ಸೂಸಿದ ಚಂದ್ರ ಆರ್ಯ

ಕೆನಡಾ ಸಂಸತ್ ನಲ್ಲಿ ಕನ್ನಡದ ಕಂಪು ಸೂಸಿದ ಚಂದ್ರ ಆರ್ಯ

0

ಕೆನಡಾ(Canada): ಕನ್ನಡಿಗ ಚಂದ್ರ ಅವರು ಆರ್ಯ ಕೆನಡಾ ಸಂಸತ್ ನಲ್ಲಿ ಕನ್ನಡದಲ್ಲಿ ಮಾತನಾಡುವ ಮೂಲಕ ಕನ್ನಡಿಗರ ಮನಗೆದ್ದಿದ್ದಾರೆ.

ಕೆನಡಾ ಸಂಸತ್ ಸದಸ್ಯರಾಗಿ ಆಯ್ಕೆಯಾಗಿರುವ ಚಂದ್ರ ಆರ್ಯ, ನನ್ನ ಮಾತೃಭಾಷೆಯಾದ ಕನ್ನಡದಲ್ಲಿ ಮಾತನಾಡುತ್ತೇನೆ ಎಂದು ಕೆನಡಾ ಪಾರ್ಲಿಮೆಂಟ್​ನಲ್ಲಿ ಭಾಷಣ ಮಾಡಿದರು.

ಬೇರೆ ದೇಶದ ಸಂಸತ್ತಿನಲ್ಲಿ ಕನ್ನಡ ಮಾತನಾಡುತ್ತಿರುವುದು ಇದೇ ಮೊದಲ ಬಾರಿಯಾಗಿದೆ.

‘ಈ ಸುಂದರ ಭಾಷೆ ಸುದೀರ್ಘ ಇತಿಹಾಸ ಹೊಂದಿದೆ. ಕನ್ನಡ ಭಾಷೆಯನ್ನು‌ 5 ಕೋಟಿ ಜನರು ಮಾತನಾಡುತ್ತಾರೆ’ ಎಂದು ಹೇಳುವ ಮೂಲಕ ಅವರು ಭಾಷಾಭಿಮಾನ ಮೆರೆದರು.

ನಂತರ ಕುವೆಂಪು ರಚನೆಯ ಮತ್ತು ಡಾ.ರಾಜಕುಮಾರ್ ಹಾಡಿರುವ ಭಾವಗೀತೆಯಾದ ‘ಎಲ್ಲಾದರೂ ಇರು, ಎಂತಾದರೂ ಇರು, ಎಂದೆಂದಿಗೂ ನೀ ಕನ್ನಡವಾಗಿರು’ ಎಂದು ಹೇಳುವ ಮೂಲಕ ತಮ್ಮ ಭಾಷಣ ಮುಗಿಸಿದರು.

ಚಂದ್ರ ಆರ್ಯ ಅವರ ಮಾತೃ ಭಾಷಾಭಿಮಾನಕ್ಕೆ ಇಡೀ ಕರ್ನಾಟವೇ ಪ್ರಶಂಸೆ ವ್ಯಕ್ತಪಡಿಸಿದೆ. ಸಚಿವೆ ಶಶಿಕಲಾ ಜೊಲ್ಲೆ ಟ್ವೀಟ್ ಮಾಡಿ, ‘ಕೆನಡಾ ಸಂಸತ್ ಸದಸ್ಯರಾಗಿ ಆಯ್ಕೆಯಾಗಿರುವ ಕನ್ನಡಿಗರಾದ ಶ್ರೀ ಚಂದ್ರ ಆರ್ಯ ಅವರು ಕೆನಡಾ ಸಂಸತ್ತಿನಲ್ಲಿ ನಮ್ಮ ಮಾತೃ ಭಾಷೆ ಕನ್ನಡದಲ್ಲಿ ಮಾತನಾಡಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ಸಂಗತಿ ಎಂದು ​ಹೇಳಿದ್ದಾರೆ.

ಹಿಂದಿನ ಲೇಖನಕರ್ನಾಟಕದ ಮೂರು ಜಿಲ್ಲೆಗಳಿಂದ ಕಬ್ಬಿಣದ ಅದಿರು ರಫ್ತಿಗೆ ಸುಪ್ರೀಂ ಅನುಮತಿ
ಮುಂದಿನ ಲೇಖನಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಬೆಂಗಳೂರು ಸಿಟಿ ರೌಂಡ್ಸ್