ಮನೆ ಕಾನೂನು ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣ: ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಕೆ

ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣ: ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಕೆ

0

ಹುಬ್ಬಳ್ಳಿ(Hubballi): ಸರಳ ವಾಸ್ತುತಜ್ಞ ಚಂದ್ರಶೇಖರ ಗುರೂಜಿ ಕೊಲೆಗೆ ಸಂಬಂಧಿಸಿದಂತೆ ಹುಬ್ಬಳ್ಳಿ ಪೊಲೀಸರು, ಆರೋಪಿಗಳಿಬ್ಬರ ವಿರುದ್ಧ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ಪ್ರಕರಣದ ತನಿಖಾಧಿಕಾರಿ ಎಸಿಪಿ ವಿನೋದ ಮುಕ್ತೇದಾರ ಅವರು, 800ಕ್ಕೂ ಹೆಚ್ಚು ಪುಟಗಳ ಆರೋಪಪಟ್ಟಿಯನ್ನು ಕೋರ್ಟ್‌ಗೆ ಸಲ್ಲಿಸಿದ್ದಾರೆ.

ಆರೋಪಪಟ್ಟಿಯಲ್ಲಿ ಕೊಲೆಗೆ ಕಾರಣವಾದ ಗುರೂಜಿ ಮತ್ತು ಆರೋಪಿಗಳಿಬ್ಬರ ನಡುವಿನ ಆಸ್ತಿ ವಿವಾದ ಸೇರಿದಂತೆ, ಇತರ ವಿಷಯಗಳಿಗೆ ಸಂಬಂಧಿಸಿದ ವಿವರಗಳನ್ನು ಒಳಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಏನಿದು ಘಟನೆ? : ನಗರದ ಉಣಕಲ್ ಬಳಿಯ ಇರುವ ಪ್ರೆಸಿಡೆಂಟ್ ಹೋಟೆಲ್‌ನಲ್ಲಿ ಜುಲೈ 5ರಂದು ಮಹಾಂತೇಶ ಶಿರೂರ ಮತ್ತು ಮಂಜುನಾಥ ಮರೇವಾಡ ಗುರೂಜಿಯನ್ನು ಚಾಕುವಿನಿಂದ ಮನಸೋ ಇಚ್ಛೆ ಇರಿದು ಕೊಲೆ ಮಾಡಿ ಪರಾರಿಯಾಗಿದ್ದರು. ಘಟನೆ ನಡೆದ ನಾಲ್ಕು ತಾಸಿನೊಳಗೆ ಪೊಲೀಸರು ಬೆಳಗಾವಿ ಜಿಲ್ಲೆಯ ರಾಮದುರ್ಗದ ಬಳಿ ಆರೋಪಿಗಳನ್ನು ಬಂಧಿಸಿದ್ದರು. ಪ್ರಕರಣದ ತನಿಖೆಗಾಗಿ ಪೊಲೀಸ್ ಕಮಿಷನರ್ ಲಾಭೂರಾಮ್ ಅವರು, ಎಸಿಪಿ ನೇತೃತ್ವದಲ್ಲಿ ತನಿಖಾ ತಂಡ ರಚಿಸಿದ್ದರು. ಗುರೂಜಿ ಮತ್ತು ಆರೋಪಿಗಳ ನಡುವೆ ಇದ್ದ ವ್ಯವಹಾರಗಳು ಸೇರಿದಂತೆ, ವಿವಿಧ ಆಯಾಮಗಳ ಕುರಿತು ತಂಡವು ಸತತ ಮೂರು ತಿಂಗಳು ತನಿಖೆ ನಡೆಸಿತ್ತು.