ಬೆಂಗಳೂರು: ರೈಲ್ವೆ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ಚಂದ್ರು ಎಂಬ ಯುವಕ ತಡರಾತ್ರಿ ಹೋಟೆಲ್‌ನಲ್ಲಿ ಊಟ ಮಾಡಿ ಮನೆಗೆ ಬರುತ್ತಿದ್ದ ವೇಳೆ ಕೊಲೆ ನಡೆದಿದೆ. ಜಗಜೀವನ್‌ರಾಮ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಶಾಹಿದ್ ಪಾಷಾ (21 ವರ್ಷ), ಶಾಹಿದ್ ಗೋಲಿ (22 ವರ್ಷ) ಎಂಬ ಚಂದ್ರುನನ್ನು ಹೊಡೆದು ಕೊಂದ ಅಪ್ರಾಪ್ತನನ್ನು ಪೊಲೀಸರು ಬಂಧಿಸಿದ್ದಾರೆ.
ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಚಂದ್ರು ಅಸುನೀಗಿದ್ದಾನೆ. ಸ್ನೇಹಿತನ ಮೇಲೆ ಕೂಡ ಹಲ್ಲೆ ಮಾಡಲಾಗಿದೆ. ಘಟನೆಯ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ದೃಶ್ಯಗಳನ್ನು ಆಧರಿಸಿ ಮೂವರನ್ನು ಬಂದಿಸಲಾಗಿದೆ.
ಘಟನೆ ಸಂಬಂಧ ಡಿಸಿಪಿ ಅನುಚೇತ್ ಮಾತನಾಡಿ, ಹಳೆಗುಡ್ಡದಳ್ಳಿ ಬಳಿ ಕಬಾಬ್ ಸೆಂಟರ್ ಗೆ ಹೋಗಿದ್ದ ವೇಳೆ ಸೈಯದ್ ಬೈಕ್ ತಗುಲಿದ್ದರಿಂದ ಗಲಾಟೆ ಶುರುವಾಗಿದೆ. ಗಲಾಟೆಯಲ್ಲಿ 22 ವರ್ಷ ಚಂದ್ರುವಿಗೆ ತೊಡೆಗೆ ಚಾಕುವಿನಿಂದ ಹಿರಿಯಲಾಗಿದೆ. ರಕ್ತಸ್ರಾವದಿಂದ ಚಂದ್ರು ಅಸುನೀಗಿದ್ದಾನೆ’ ಎಂದು ಹೇಳಿದ್ದಾರೆ. ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್,”ಏಪ್ರಿಲ್ 5ರ ಮಧ್ಯ ರಾತ್ರಿ ಸ್ನೇಹಿತನೊಂದಿಗೆ ಚಂದ್ರು ಮೈಸೂರು ರಸ್ತೆ ಕಡೆಗೆ ಹೋಗಿದ್ದರು. ವಾಪಸ್ಸು ಮರಳುತ್ತಿದ್ದಾಗ ಅವರ ಬೈಕ್ ಮತ್ತೊಂದು ಬೈಕ್‌ಗೆ ತಗುಲಿದೆ. ಈ ವೇಳೆ ಗಲಾಟೆ ನಡೆದಿದೆ. ಗಲಾಟೆಗೆ ಸ್ಥಳೀಯ ಗುಂಪು ಸೇರಿಕೊಂಡಿದೆ. ಗುಂಪಿನಲ್ಲಿದ್ದ ಓರ್ವ ವ್ಯಕ್ತಿ ಚಂದ್ರು ಮೇಲೆ ಹಲ್ಲೆ ಮಾಡಿದ್ದಾನೆ. ಕೂಡಲೇ ಗಾಯಗೊಂಡಿದ್ದ ಚಂದ್ರು ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಅಧಿಕ ರಕ್ತ ಸ್ರಾವದಿಂದಾಗಿ ಆತ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ. ಘಟನೆಯಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಚಂದ್ರು ಎಂಬಾತನ ಹತ್ಯೆ ನಡೆದಿದೆ. ಕನ್ನಡ ಬಿಟ್ಟು ಬೇರೆ ಭಾಷೆ ಮಾತನಾಡುವುದಿಲ್ಲ ಎಂದಿದ್ದಕ್ಕೆ ಚೂರಿಯಿಂದ ಚುಚ್ಚಿ ಅಮಾನುಷವಾಗಿ ಕೊಲೆ ಮಾಡಿದ್ದಾರೆ. ಈ ಸಂಬಂಧ ಮೂವರು ಆರೋಪಿಗಳನ್ನು ಬಂಧನ ಮಾಡಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದಾರೆ.