ಮನೆ ರಾಜಕೀಯ ಚಂದ್ರು ಕೊಲೆ ಪ್ರಕರಣ: ಸಚಿವ ಅರಗ ಜ್ಞಾನೇಂದ್ರ ಸ್ಪಷ್ಟನೆ

ಚಂದ್ರು ಕೊಲೆ ಪ್ರಕರಣ: ಸಚಿವ ಅರಗ ಜ್ಞಾನೇಂದ್ರ ಸ್ಪಷ್ಟನೆ

0

ಬೆಂಗಳೂರು: ನಗರದಲ್ಲಿ ಸೋಮವಾರ ರಾತ್ರಿ, ಚೂರಿ ಇರಿತಕ್ಕೆ ಒಬ್ಬ ಯುವಕ ಬಲಿಯಾದ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಿಸಿದಂತೆ ಇದುವರೆಗೆ ಮೂರು ಮಂದಿಯನ್ನು ಪೋಲೀಸರು ಬಂಧಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು,  ತಕ್ಷಣಕ್ಕೆ ಸಿಕ್ಕ ಮಾಹಿತಿ ಹಾಗೂ ಮೂಲಗಳ, ಪ್ರಕಾರ, ಉರ್ದು ಮಾತನಾಡದ ಕಾರಣ, ಯುವಕನನ್ನು ಚೂರಿಯಿಂದ ಚುಚ್ಚಿ ಕೊಲೆಗೈಯ್ಯಲಾಗಿದೆ ಎಂದು ಹೇಳಿಕೆ ನೀಡಲಾಗಿದೆ. ಆದರೆ ತಾನು ನೀಡಿದ ಹೇಳಿಕೆ ತಪ್ಪಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಪ್ರಸ್ತುತ ಘಟನೆಗೆ ಸಂಬಂಧಿಸಿದಂತೆ, ಪೂರ್ಣ ಹಾಗೂ ವಿಸ್ತೃತ ಮಾಹಿತಿ ದೊರಕಿದ್ದು, ಸ್ಥಳದಲ್ಲಿ ನಡೆದ ದ್ವಿಚಕ್ರ ವಾಹನ ಅಪಘಾತಕ್ಕೆ ಸಂಬಂಧಿಸಿದಂತೆ, ಯುವಕರ ನಡುವೆ ಮಾತಿನ ಚಕಮಕಿ ನಡೆದಿದೆ.ವಾಗ್ಯುದ್ದದ ನಡುವೆ, ವಾಹನ ಚಾಲಕನಿಗೆ, ದುಷ್ಕರ್ಮಿಗಳು, ಚೂರಿಯಿಂದ ಇರಿದು ಗಾಯಗೊಳಿಸಿದ್ದಾರೆ.

ದುರದೃಷ್ಟವಶಾತ್, ಗಾಯಾಳುವಿಗೆ ಚಿಕಿತ್ಸೆ ಕೊಡಿಸಿದರೂ, ಬದುಕುಳಿಯಲಿಲ್ಲ. ಈ ಘಟನೆ ಅತ್ಯಂತ ಅಮಾನುಷವಾಗಿದ್ದು, ಕೊಲೆ ಆಪಾದಿತರನ್ನು ಶಿಕ್ಷೆಗೆ ಗುರಿ ಪಡಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಆರಂಭದಲ್ಲಿ ನೀಡಿದ್ದ ಹೇಳಿಕೆ ಬಗ್ಗೆ ಚರ್ಚೆಯಾಗುತ್ತಿದ್ದಂತೆ ಸಚಿವರು ಸ್ಪಷ್ಟನೆ ಕೊಟ್ಟಿದ್ದಾರೆ.