ಮನೆ ರಾಜ್ಯ ಬೆಸ್ಕಾಂಗೆ ‘ಚಾರ್ಜ್ ಇಂಡಿಯಾ 2024 ಎಕ್ಸಲೆನ್ಸ್’ ಪ್ರಶಸ್ತಿ

ಬೆಸ್ಕಾಂಗೆ ‘ಚಾರ್ಜ್ ಇಂಡಿಯಾ 2024 ಎಕ್ಸಲೆನ್ಸ್’ ಪ್ರಶಸ್ತಿ

0

ಬೆಂಗಳೂರು, ನವೆಂಬರ್‌ 4, 2024: ಇಲೆಕ್ಟ್ರಿಕ್‌ ವಾಹನಗಳ ಬಳಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಉತ್ತಮ ಚಾರ್ಚಿಂಗ್‌ ಮೂಲಸೌಕರ್ಯ ಕಲ್ಪಿಸಿರುವ ಬೆಸ್ಕಾಂಗೆ ‘ಚಾರ್ಜ್ ಇಂಡಿಯಾ 2024 ಎಕ್ಸಲೆನ್ಸ್’ ಪ್ರಶಸ್ತಿ ಸಂದಿದೆ.

Join Our Whatsapp Group

ಇ-ಮೊಬಿಲಿಟಿ ಸಂಸ್ಥೆ ಇತ್ತೀಚೆಗೆ ಆಯೋಜಿಸಿದ್ದ ಸಮಾರಂಭದಲ್ಲಿ ಬೆಸ್ಕಾಂಗೆ ‘ಚಾರ್ಜ್ ಇಂಡಿಯಾ 2024 ಎಕ್ಸಲೆನ್ಸ್’ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ಇವಿ ಚಾರ್ಚಿಂಗ್‌ ಸೇವೆ ಒದಗಿಸುವ ಖಾಸಗಿ ಸಂಸ್ಥೆಗಳ ಪ್ರತಿನಿಧಿಗಳು ಸೇರಿದಂತೆ ಇವಿ ಉದ್ಯಮದ ಪ್ರಮುಖರು ಸಮಾರಂಭದಲ್ಲಿ ಭಾಗಿಯಾಗಿದ್ದರು.

ದೇಶದಲ್ಲೇ ಅತಿ ಹೆಚ್ಚು ಸಾರ್ವಜನಿಕ ಎಲೆಕ್ಟ್ರಿಕ್ ವೆಹಿಕಲ್ ಚಾರ್ಜಿಂಗ್ ಸ್ಟೇಷನ್‌ಗಳನ್ನು ಹೊಂದಿರುವ ರಾಜ್ಯ ಎಂಬ ಹೆಗ್ಗಳಿಕೆಗೆ ನಮ್ಮದಾಗಿದ್ದು, ಒಟ್ಟು 5,765 ಇವಿ ಚಾರ್ಜಿಂಗ್‌ ಸ್ಟೇಷನ್‌ಗಳಿವೆ. 5,765 ಇವಿ ಚಾರ್ಜಿಂಗ್ ಸ್ಟೇಷನ್‌ಗಳಿರುವ ಕರ್ನಾಟಕ ಮೊದಲ ಸ್ಥಾನದಲ್ಲಿದ್ದರೆ, 3,728 ಚಾರ್ಜಿಂಗ್ ಸ್ಟೇಷನ್ ಹೊಂದಿರುವ ಮಹಾರಾಷ್ಟ್ರ 2ನೇ ಸ್ಥಾನದಲ್ಲಿದೆ. ಉತ್ತರ ಪ್ರದೇಶ- 1,989 ಮತ್ತು ದಿಲ್ಲಿ- 1,941 ಚಾರ್ಜಿಂಗ್ ಸ್ಟೇಷನ್ ಗಳೊಂದಿಗೆ ನಂತರದ ಸ್ಥಾನದಲ್ಲಿವೆ.

ದೇಶದ ಪ್ರಮುಖ ನಗರಗಳಲ್ಲಿ ಇವಿ ಬಳಕೆದಾರರ ಸಂಖ್ಯೆ ಹೆಚ್ಚಿದ್ದರೂ, ರಾಜ್ಯ ಅದರಲ್ಲೂ ವಿಶೇಷವಾಗಿ ಬೆಂಗಳೂರಿನಲ್ಲಿ ಅತಿ ಹೆಚ್ಚು ಇವಿ ಬಳಕೆದಾರರಿದ್ದಾರೆ. ಅದಕ್ಕೆ ಪೂರಕವಾಗಿ ಸರ್ಕಾರ ಅಗತ್ಯ ಮೂಲ ಸೌಕರ್ಯ ಒದಗಿಸಿದೆ. ಇವಿ ಚಾರ್ಜಿಂಗ್ ಸ್ಟೇಷನ್ ವಿಚಾರದಲ್ಲಿ ಬೆಂಗಳೂರು ನಗರವು ಮುಂಚೂಣಿಯಲ್ಲಿದ್ದು, ನಗರ ಜಿಲ್ಲೆಯಲ್ಲಿ 4,462 ಇವಿ ಚಾರ್ಜಿಂಗ್ ಸ್ಟೇಷನ್‌ಗಳಿವೆ. ಇದು ರಾಜ್ಯದ ಒಟ್ಟಾರೆ ಇವಿ ಚಾರ್ಜಿಂಗ್‌ ಸ್ಟೇಷನ್‌ಗಳ ಪೈಕಿ ಶೇ. 85ರಷ್ಟು.

ಇವಿ ಚಾರ್ಚಿಂಗ್‌ ಸ್ಟೇಷನ್‌ಗಳ ಜತೆಗೆ ಇವಿ ಬಳಕೆದಾರರಿಗೆ ಸುಗಮ ಚಾರ್ಜಿಂಗ್‌ ಸೌಲಭ್ಯ ಒದಗಿಸುವಲ್ಲಿ ‘ಇವಿ ಮಿತ್ರ’ ಆ್ಯಪ್‌ ಪಾತ್ರವೂ ದೊಡ್ಡದು. ಆ್ಯಂಡ್ರಾಯ್ಡ್ ಮತ್ತು ಐಓಎಸ್‌ ಎರಡು ಮೊಬೈಲ್‌ ಅಪ್ಲಿಕೇಶನ್‌ಗಳಲ್ಲಿ ಲಭ್ಯವಿರುವ ಹೊಸ ‘ಇವಿ ಮಿತ್ರ’ ಆ್ಯಪ್‌- ಬಳಕೆದಾರರ ಪ್ರೊಫೈಲ್‌ ನಿರ್ವಹಣೆ, ಚಾರ್ಚಿಂಗ್‌ ಸ್ಟೇಷನ್‌ಗಳ ವೀಕ್ಷಣೆಯೊಂದಿಗೆ ಮಾಹಿತಿ, ಚಾರ್ಜಿಂಗ್‌ ಪ್ರಕ್ರಿಯೆ, ಬುಕ್ಕಿಂಗ್‌ ವಿವರ, ಚಾರ್ಚಿಂಗ್ ಸ್ಟೇಷನ್‌ಗಳಲ್ಲಿರುವ ಸೌಕರ್ಯಗಳು ಮತ್ತು ಚಾರ್ಜಿಂಗ್‌ ಕಾಯ್ದಿರಿಸುವ ಸೌಲಭ್ಯ ಹೊಂದಿದೆ. ಹಣ ಪಾವತಿಗೆ ಹಲವು ಆಯ್ಕೆಗಳನ್ನು ಒಳಗೊಂಡಿದೆ. ರಿಟೇಲ್‌ ಬಳಕೆದಾರರ ಶುಲ್ಕದ ವಿವರ, ಬಿಲ್ಲಿಂಗ್, ಪ್ರೊಫೈಲ್ ಲಭ್ಯವಿದೆ.

ಇವಿ ಸ್ಟೇಷನ್‌ಗಳ ವಿವರ:
ರಾಜ್ಯದಲ್ಲಿರುವ ಒಟ್ಟು ಇವಿ ಚಾರ್ಚಿಂಗ್ ಸ್ಟೇಷನ್‌ಗಳು: 5765
ಬೆಸ್ಕಾಂ ಸ್ಥಾಪಿಸಿರುವ ಇವಿ ಚಾರ್ಚಿಂಗ್ ಸ್ಟೇಷನ್‌ಗಳು: 195
ಇತರ ಎಸ್ಕಾಂಗಳು ಸ್ಥಾಪಿಸಿರುವ ಇವಿ ಚಾರ್ಚಿಂಗ್ ಸ್ಟೇಷನ್‌ಗಳು: 70
ಸರ್ಕಾರದ ಇತರ ಇಲಾಖೆಗಳು ಸ್ಥಾಪಿಸುರವ ಚಾರ್ಚಿಂಗ್ ಸ್ಟೇಷನ್‌ಗಳು: 21
ಖಾಸಗಿ ಚಾರ್ಚಿಂಗ್ ಸ್ಟೇಷನ್‌ಗಳು: 5479