ಮನೆ ರಾಜ್ಯ ಮತಗಟ್ಟೆಗಳ ಮೂಲಭೂತ ವ್ಯವಸ್ಥೆಗಳನ್ನು ಪರಿಶೀಲಿಸಿ, ಅಗತ್ಯ ಸೌಲಭ್ಯ ಕಲ್ಪಿಸಿ : ಡಾ ರಾಜೇಂದ್ರ

ಮತಗಟ್ಟೆಗಳ ಮೂಲಭೂತ ವ್ಯವಸ್ಥೆಗಳನ್ನು ಪರಿಶೀಲಿಸಿ, ಅಗತ್ಯ ಸೌಲಭ್ಯ ಕಲ್ಪಿಸಿ : ಡಾ ರಾಜೇಂದ್ರ

0

ಮೈಸೂರು: ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ಕ್ಕೆ ಸಂಬoಧಿಸಿದoತೆ ಚುನಾವಣಾ ನೋಡಲ್ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿರುವ ಮತಗಟ್ಟೆಗಳಿಗೆ ಭೇಟಿ ನೀಡಿ ಮೂಲಭೂತ ವ್ಯವಸ್ಥೆಗಳನ್ನು ಪರಿಶೀಲಿಸುವಂತೆ ಜಿಲ್ಲಾಧಿಕಾರಿ ಡಾ: ಕೆ.ವಿ.ರಾಜೇಂದ್ರ ಅವರ ತಿಳಿಸಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು ಮತಗಟ್ಟೆಗಳು ಹೆಚ್ಚಾಗಿ ಶಾಲೆಗಳು ಹಾಗೂ ಅಂಗನವಾಡಿಗಳಲ್ಲಿ ಇರುತ್ತದೆ. ಈ ಸಂಬoಧ ಮತಗಟ್ಟೆಗಳಲ್ಲಿ ಟೇಬಲ್, ಚೇರ್, ವಿದ್ಯುತ್ ದೀಪಗಳು, ಶೌಚಾಲಯದ ವ್ಯವಸ್ಥೆ, ನೀರಿನ ವ್ಯವಸ್ಥೆಗಳನ್ನು ಪರಿಶೀಲಿಸಿ ಸಣ್ಣ ಪುಟ್ಟ ರಿಪೇರಿಗಳಿದ್ದಲ್ಲಿ ಗಮನಕ್ಕೆ ತಂದು ಸರಿಪಡಿಸಿಕೊಳ್ಳಿ ಎಂದು ತಿಳಿಸಿದರು.

 ಚುನಾವಣಾ ಪ್ರಕ್ರಿಯೆಲ್ಲಿ ಸರ್ಕಾರಿ ನೌಕಕರಾದ ನಾವೆಲ್ಲ ತೊಡಗಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಚುನಾವಣಾ ಮಾರ್ಗ ಸೂಚಿ ಪ್ರಕಾರ ಕೆಲಸ ನಿರ್ವಹಿಸಬೇಕು. ಸ್ವೀಪ್ ಚಟುವಟಿಕೆಗಳನ್ನು ಹಮ್ಮಿಕೊಳ್ಳುವುದರ ಮೂಲಕ ಮತದಾರರಲ್ಲಿ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.

ಮತಗಟ್ಟೆ ವ್ಯಾಪ್ತಿಯಲ್ಲಿ ಬರುವ ವಿಕಲಚೇತನರಿಗೆ ರ್ಯಾಂಪ್ ವ್ಯವಸ್ಥೆ, ವೀಲ್ಚೇರ್ ಸೇರಿದಂತೆ ಇನ್ನಿತರೆ ವ್ಯವಸ್ಥೆಯ ಬಗ್ಗೆ ಖುದ್ದಾಗಿ ಭೇಟಿ ನೀಡುಬೇಕು. 2018 ರ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಕಡಿಮೆ ಮತದಾನವಾಗಿರುವ ಮತಗಟ್ಟೆಗಳಿಗೆ ಭೇಟಿ ನೀಡಿ ಕಾರಣ ತಿಳಿದುಕೊಂಡು, ಹೆಚ್ಚಿನ ರೀತಿಯಲ್ಲಿ ಸ್ವೀಪ್ ಚಟುವಟಿಕೆಗಳನ್ನು ಆಯೋಜಿಸಿ ಮತದಾನದ ಪ್ರಮಾಣವನ್ನು ಹೆಚ್ಚಿಸಿ ತಿಳಿಸಿದರು.

ಮಾರ್ಚ್ 17, 18 ಹಾಗೂ 19 ರಂದು ಜಿಲ್ಲೆಗೆ ಉಪಲೋಕಾಯುಕ್ತರು ಭೇಟಿ ನೀಡುತ್ತಿದ್ದು ಯಾವ ಯಾವ ಇಲಾಖೆಗಳಲ್ಲಿ ಲೋಕಾಯುಕ್ತ ಪ್ರಕರಣಗಳಿವೆಯೋ ಅವುಗಳನ್ನು ಗುರುತಿಸಿಕೊಳ್ಳಿ ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾದ ಗಾಯಿತ್ರಿ, ಅಪರ ಜಿಲ್ಲಾಧಿಕಾರಿಗಳಾದ ಕವಿತಾ ರಾಜರಾಂ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.