ಮನೆ ರಾಜ್ಯ ಬನ್ನೇರುಘಟ್ಟ ಮೃಗಾಲಯಕ್ಕೆ ಆಫ್ರಿಕಾದಿಂದ ಬೆಂಗಳೂರಿಗೆ ಬಂದ ಚೀತಗಳು

ಬನ್ನೇರುಘಟ್ಟ ಮೃಗಾಲಯಕ್ಕೆ ಆಫ್ರಿಕಾದಿಂದ ಬೆಂಗಳೂರಿಗೆ ಬಂದ ಚೀತಗಳು

0

ಆನೇಕಲ್ : ಮಧ್ಯರಾತ್ರಿ ದಕ್ಷಿಣ ಆಫ್ರಕಾದಿಂದ ಬೆಂಗಳೂರಿಗೆ ಹೊಸ ಅತಿಥಿಗಳ ಆಗಮನವಾಗಿದೆ. ಎರಡು ಗಂಡು ಮತ್ತು ಎರಡು ಹೆಣ್ಣು ಚಿತಾ (ಸಿವಂಗಿ) ದಕ್ಷಿಣ ಆಫ್ರಿಕಾದಿಂದ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದಿವೆ.

ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಚೀತಾಗಳನ್ನು ವಿಮಾನ ನಿಲ್ದಾಣಕ್ಕೆ ತೆರಳಿ ಅರಣ್ಯ ಸಚಿವ ಈಶ್ವರ ಖಂಡ್ರೆ ಬರಮಾಡಿಕೊಂಡಿದ್ದಾರೆ. ಈ ಚೀತಾಗಳಿಗೆ ವಾತಾವರಣ, ಹವಾಮಾನ ಬದಲಾವಣೆಯಾಗುವ ಕಾರಣ, ಅವುಗಳಿಗೆ ಯಾವುದೇ ತೊಂದರೆ ಆಗದಂತೆ ಮತ್ತು ಆರೋಗ್ಯ ಸಮಸ್ಯೆ ಎದುರಾಗದ ರೀತಿಯಲ್ಲಿ ಸೂಕ್ತ ನಿಗಾ ಇಡಲು ಸೂಚನೆ ನೀಡಲಾಗಿದೆ.‌

ವನ್ಯಜೀವಿಗಳನ್ನು ಕ್ವಾರಂಟೈನಲ್ಲಿಡಬೇಕು, 30 ದಿನಗಳ ಕಾಲ ಗೊತ್ತುಪಡಿಸಿದ ಆಹಾರ ನೀಡಬೇಕು, ಈ ವಿದೇಶಿ ವನ್ಯಜೀವಿಗಳಿಗೆ ಸೋಂಕು ಏನಾದರೂ ಇದೆಯೇ ಎಂದು ಪರಿಶೀಲಿಸಬೇಕು. ಪ್ರಾಣಿಗಳನ್ನು ಸುರಕ್ಷಿತವಾಗಿ ಬನ್ನೇರುಘಟ್ಟಕ್ಕೆ ಸಾಗಿಸಬೇಕು ಎಂದು ಅಧಿಕಾರಿಗಳಿಗೆ ಮತ್ತು ಪಶುವೈದ್ಯಾಧಿಕಾರಿಗೆ ಸಚಿವರು ತಿಳಿಸಿದ್ದಾರೆ.

ಒಂದು ಕಾಲದಲ್ಲಿ ಕರ್ನಾಟಕದ ಕಾಡುಗಳಲ್ಲಿಯೇ ಸಿವಂಗಿ ಎಂದು ಕರೆಸಿಕೊಳ್ಳುವ ಚೀತಾಗಳಿದ್ದವು. ಆದರೆ, ರಾಜ್ಯದ ಕಾಡಿನಲ್ಲಿ ಇವು ಈಗ ನಾಮಾವಶೇಷ. ಹೀಗಾಗಿ, ಮೃಗಾಲಯಗಳಲ್ಲಾದರೂ ಇವುಗಳನ್ನು ನೋಡಲು ಅವಕಾಶ ಆಗಬೇಕೆಂದು ಅರಣ್ಯ ಇಲಾಖೆ ಚೀತಾಗಳನ್ನು ತರಿಸಿದೆ. ಚೀತಾಗಳ ಸುರಕ್ಷತೆಗೆ ಆದ್ಯ ಗಮನ ನೀಡುವಂತೆ ಕರ್ನಾಟಕ ಮೃಗಾಲಯ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸುನೀಲ್ ಪನ್ವಾರ್ ಅವರಿಗೆ ಸೂಚನೆ ನೀಡಲಾಗಿದೆ.