ಮನೆ ಕಾನೂನು ಚೆಕ್‌ ಬೌನ್ಸ್ ಪ್ರಕರಣ: ಸ್ನೇಹಮಯಿ ಕೃಷ್ಣಗೆ ಶಿಕ್ಷೆ ವಿಧಿಸಿದ ಮೈಸೂರಿನ ಮೂರನೇ ಹೆಚ್ಚುವರಿ ಸಿವಿಲ್‌ ಹಾಗೂ...

ಚೆಕ್‌ ಬೌನ್ಸ್ ಪ್ರಕರಣ: ಸ್ನೇಹಮಯಿ ಕೃಷ್ಣಗೆ ಶಿಕ್ಷೆ ವಿಧಿಸಿದ ಮೈಸೂರಿನ ಮೂರನೇ ಹೆಚ್ಚುವರಿ ಸಿವಿಲ್‌ ಹಾಗೂ ಜೆಎಂಎಫ್‌ ನ್ಯಾಯಾಲಯ

0

ಮೈಸೂರು:  ಚೆಕ್‌ ಬೌನ್ಸ್ ಪ್ರಕರಣದಲ್ಲಿ ಆರೋಪಿ ಸ್ನೇಹಮಯಿ ಕೃಷ್ಣಗೆ ಇಲ್ಲಿನ ಮೂರನೇ ಹೆಚ್ಚುವರಿ ಸಿವಿಲ್‌ ಹಾಗೂ ಜೆಎಂಎಫ್‌ ನ್ಯಾಯಾಲಯವು ಶಿಕ್ಷೆ ಪ್ರಕಟಿಸಿ ಗುರುವಾರ ಆದೇಶಿಸಿತು.

Join Our Whatsapp Group

ಕೃಷ್ಣ 2015ರಲ್ಲಿ ಲಲಿತಾದ್ರಿಪುರದ ಕುಮಾರ್‌ ಎಂಬವರಿಂದ ಸಾಲ ಪಡೆದಿದ್ದರು. ಅದಕ್ಕೆ ಪ್ರತಿಯಾಗಿ ಮರ್ಚೆಂಟ್ಸ್‌ ಕೋ–ಆಪರೇಟಿವ್‌ ಬ್ಯಾಂಕ್‌ನ ಚೆಕ್ ನೀಡಿದ್ದರು. ಕುಮಾರ್‌ ಅದನ್ನು ತಮ್ಮ ಬ್ಯಾಂಕ್ ಖಾತೆಗೆ ಹಾಕಿದಾಗ ಬೌನ್ಸ್‌ ಆಗಿತ್ತು. ನಂತರ ಅವರು ಕೃಷ್ಣ ವಿರುದ್ಧ ಪ್ರಕರಣ ದಾಖಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯವು, ಆರೋಪ ಸಾಬೀತಾಗಿದ್ದರಿಂದ ಶಿಕ್ಷೆ ಪ್ರಕಟಿಸಿದೆ. ಆದರೆ ಶಿಕ್ಷೆಯ ಪ್ರಮಾಣ ಪ್ರಕಟಿಸಿಲ್ಲ.

ಈ ಕುರಿತು ಪ್ರತಿಕ್ರಿಯಿಸಿದ ಸ್ನೇಹಮಯಿ ಕೃಷ್ಣ, ಕೋರ್ಟ್‌ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸುವುದಾಗಿ ಹೇಳಿದರು.