ಮನೆ ಆರೋಗ್ಯ ಬಳ್ಳಾರಿಯಲ್ಲಿ ಕೋಳಿ ಜ್ವರದ ಆತಂಕ: 2400 ಕೋಳಿಗಳ ಸಾವು

ಬಳ್ಳಾರಿಯಲ್ಲಿ ಕೋಳಿ ಜ್ವರದ ಆತಂಕ: 2400 ಕೋಳಿಗಳ ಸಾವು

0

ಬಳ್ಳಾರಿ: ಚಿಕ್ಕಬಳ್ಳಾಪುರ ಬಳಿಕ ಗಡಿ ಜಿಲ್ಲೆ ಬಳ್ಳಾರಿಯಲ್ಲೂ ಕೋಳಿ ಜ್ವರದ ಆತಂಕ ಮನೆಮಾಡಿದೆ. ಸಂಡೂರ ತಾಲೂಕಿನ ಕುರೇಕುಪ್ಪ ಗ್ರಾಮದ ಬಳಿಯ ಸರ್ಕಾರಿ ಪಾಲ್ಟ್ರಿ ಪಾರ್ಮನಲ್ಲಿನ 2400 ಕೋಳಿಗಳು ಹಕ್ಕಿ ಜ್ವರ ದಿಂದ ಮೃತಪಟ್ಟಿವೆ ಎಂದು ಜಿಲ್ಲಾಧಿಕಾರಿ ಪ್ರಶಾಂತ್​ ಕುಮಾರ್ ಮಿಶ್ರಾ ಮಾಹಿತಿ ನೀಡಿದ್ದಾರೆ.

Join Our Whatsapp Group

ಫೆಬ್ರವರಿ 21 ರಿಂದ ಇಲ್ಲಿಯವರೆಗೆ ಹಂತ ಹಂತವಾಗಿ 2400 ಕೋಳಿಗಳ ಮೃತಪಟ್ಟಿವೆ. ಸತ್ತ ಕೋಳಿಗಳ ಮಾದರಿ ಸಂಗ್ರಹಿಸಿ ಮಧ್ಯಪ್ರದೇಶದ ಭೂಪಾಲ್ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಪ್ ಹೈ ಸೆಕ್ಯೂರಿಟಿ ಅನಿಮಲ್ ದಿಸೀಸ್ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಪ್ರಯೋಗಾಲಯದ ವರದಿ ಬಂದ ಬಳಿಕ ಕೋಳಿಗಳಲ್ಲಿ ಹಕ್ಕಿ ಜ್ವರ ಇರುವುದು ದೃಢಪಟ್ಟಿತು. ಆಂಧ್ರಪ್ರದೇಶ, ತೆಲಂಗಾಣದಿಂದ ಸೋಂಕು ಹರಡಿರುವ ಸಾಧ್ಯತೆ ಇದೆ ಎಂದರು.

ಹಕ್ಕಿ ಜ್ವರ ದೃಢ ಹಿನ್ನೆಲೆಯಲ್ಲಿ ಬಳ್ಳಾರಿ ಜನರು ಆತಂಕಗೊಂಡಿದ್ದಾರೆ. ಇನ್ನು, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಜಿಲ್ಲೆಯಲ್ಲಿ ಅಗತ್ಯ ಕ್ರಮ ಕೈಗೊಂಡಿದೆ. ಕುರೇಕುಪ್ಪ ಗ್ರಾಮದ ಸುತ್ತಲಿನ ಒಂದು ಕಿಮೀ ದೂರವನ್ನ ಅಪಾಯಕಾರಿ ವಲಯ ಎಂದು ಗುರುತು ಮಾಡಲಾಗಿದೆ. ತೋರಣಗಲ್ಲು, ಕುರೆಕುಪ್ಪ, ವಡ್ಡು, ತಾಳೂರು, ಬಸಾಪುರ, ದರೋಜಿ, ದೇವಲಾಪುರ ಗ್ರಾಮಗಳು ಸೇರಿದಂತೆ 10 ಕಿಮೀ ವ್ಯಾಪ್ತಿಯ ಪ್ರದೇಶವನ್ನ ಕಣ್ಣಗಾವಲು ವಲಯ ಎಂದು ಗುರುತು ಮಾಡಲಾಗಿದೆ.