ಮನೆ ರಾಜ್ಯ ಮುಖ್ಯ ಆಯುಕ್ತರ ನಡೆ ವಲಯದ ಕಡೆ: ಪೂರ್ವ ವಲಯ ವ್ಯಾಪ್ತಿಯಲ್ಲಿ ಅಹವಾಲು ಸ್ವೀಕಾರ

ಮುಖ್ಯ ಆಯುಕ್ತರ ನಡೆ ವಲಯದ ಕಡೆ: ಪೂರ್ವ ವಲಯ ವ್ಯಾಪ್ತಿಯಲ್ಲಿ ಅಹವಾಲು ಸ್ವೀಕಾರ

0
https://www.youtube.com/channel/UCmDoYGj_oDaxpT_t7Pa9iEQ

ಬೆಂಗಳೂರು (Bengaluru): ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ಅವರು ಇಂದು ಪೂರ್ವವಲಯ ವ್ಯಾಪ್ತಿಯ ವಸಂತನಗರದ ಸರ್ದಾರ್ ಪಟೇಲ್ ಭವನದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿನಿಯಮ 2020ರ ಅನುಸಾರ 243 ವಾರ್ಡ್ ಗಳನ್ನಾಗಿ ಮಾಡಿದ್ದು, ಅದರಂತೆ ಇದೇ ಆಗಸ್ಟ್ ತಿಂಗಳ ಮೊದಲನೇ ಶನಿವಾರ 198 ವಾರ್ಡ್ ಗಳಲ್ಲಿ ನಡೆಯುವ ಸಭೆಗಳಲ್ಲಿ, 3ನೇ ಶನಿವಾರದಿಂದ   243 ವಾರ್ಡ್ ಗಳ ಅನುಸಾರ  ವಾರ್ಡ್ ಸಮಿತಿ ಸಭೆಗಳು ನಡೆಸುವ ಬಗ್ಗೆ ವಾರ್ಡ್ ಸಮಿತಿಯ ಸದಸ್ಯರು, ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು ಹಾಗೂ ನಾಗರೀಕರಿಗೆ ನಿಖರ ಮಾಹಿತಿ ಒದಗಿಸಬೇಕು. ಅಲ್ಲದೆ ಹೊಸ ವಾರ್ಡ್ ಗಳಿಗೆ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲು ವಲಯ ಆಯುಕ್ತರಿಗೆ ಸೂಚನೆ ನೀಡಿದರು.

ಪೂರ್ವ ವಲಯ ವ್ಯಾಪ್ತಿಯಲ್ಲಿ ಬರುವ 6 ವಿಧಾನಸಭಾ ಕ್ಷೇತ್ರಗಳ ಪೈಕಿ ಆಯಾ ವಿಧಾನಸಭಾ ಕ್ಷೇತ್ರವಾರು ಬರುವ ಕಾರ್ಯಪಾಲಕ ಅಭಿಯಂತರರು ರಸ್ತೆ ಗುಂಡಿ, ಪಾದಚಾರಿ ಮಾರ್ಗಗಳ ಅಭಿವೃದ್ಧಿಗಾಗಿ ವಾರ್ಡ್ ವಾರು ಮೀಸಲಿಟ್ಟಿರುವ ಅನುದಾನವನ್ನು ಸಮರ್ಪಕವಾಗಿ ಸದುಪಯೋಗಪಡಿಸಿಕೊಂಡು ತ್ವರಿತವಾಗಿ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಪ್ರಮುಖ ರಸ್ತೆ ರಸ್ತೆಗಳಲ್ಲಿ ಪಾದಚಾರಿ ಮಾರ್ಗಗಳನ್ನು ಅನಧಿಕೃತವಾಗಿ ಒತ್ತುವರಿ ಮಾಡಿಕೊಂಡು ವ್ಯಾಪಾರ ವಹಿವಾಟು ಮಾಡುವುದನ್ನು ಗುರುತಿಸಿ ಕೂಡಲೇ ತೆರವು ಕಾರ್ಯಾಚರಣೆ ಪ್ರಾರಂಭಿಸಲು ರಸ್ತೆ ಮೂಲಭೂತ ಸೌಕರ್ಯ ವಿಭಾಗದ ಕಾರ್ಯಪಾಲಕ ಅಭಿಯಂತರರಿಗೆ ಸೂಚಿಸಿದರು.

ಕಾಕ್ಸ್ ಟೌನ್ ಮಾರುಕಟ್ಟೆಯ ಕಟ್ಟಡ ನಿರ್ಮಾಣದ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ, ಮಾರಾಟಗಾರರು ಪಾದಚಾರಿ ಮಾರ್ಗಗಳಲ್ಲಿ ಮಾರಾಟ ಮಾಡದಂತೆ ಕ್ರಮ ಕೈಗೊಳ್ಳಲು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಆಯುಕ್ತರು ಮಾರುಕಟ್ಟೆಯ ಕಟ್ಟಡ ನಿರ್ಮಾಣದ ಬಾಕಿ ಕಾಮಗಾರಿಯನ್ನು ತ್ವರಿತವಾಗಿ ಮುಗಿಸಲು ಅಗತ್ಯ ಕ್ರಮಕೈಗೊಳ್ಳಿ ಹಾಗೂ ಪಾದಚಾರಿ ಮಾರ್ಗಗಳಲ್ಲಿ ವ್ಯಾಪಾರ ಮಾಡದಂತೆ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಿದರು.

ವಲಯ ವ್ಯಾಪ್ತಿಯಲ್ಲಿ ಪಾದಚಾರಿ ಮಾರ್ಗ ಒತ್ತುವರಿ ತೆರವು, ಬೀದಿ ದೀಪಗಳ ಅಳವಡಿಕೆ, ಮರದ ಕೊಂಬೆಗಳನ್ನು ಕತ್ತರಿಸುವುದು, ರಾಜಕಾಲುವೆಗಳು ಹಾಗೂ ರಸ್ತೆ ಬದಿಯ ಸೈಡ್ ಡ್ರೈನ್ ಗಳಲ್ಲಿ ಹೂಳೆತ್ತುವುದು ಸೇರಿದಂತೆ ಇನ್ನಿತರೆ ಸಮಸ್ಯೆಗಳ ಬಗ್ಗೆ ಸಾರ್ವಜನಿಕರು ತಿಳಿಸಿದ್ದು, ಸದರಿ ಸಮಸ್ಯೆಗಳ ಪೈಕಿ ತ್ವರಿತವಾಗಿ ಬಗೆಹರಿಯುವ ಸಮಸ್ಯೆಗಳನ್ನು ನಿಗದಿತ ಸಮಯದೊಳಗಾಗಿ ಪೂರ್ಣಗೊಳಿಸಲು ಮುಖ್ಯ ಆಯುಕ್ತರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ವೇಳೆ ವಲಯ ಆಯುಕ್ತರಾದ ಪಿ.ಎನ್.ರವೀಂದ್ರ, ವಲಯ ಜಂಟಿ ಆಯುಕ್ತರಾದ ಶಿಲ್ಪಾ, ವಲಯ ಮುಖ್ಯ ಅಭಿಯಂತರರಾದ ಸುಗುಣಾ ಹಾಗೂ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.